ಬೆಂಗಳೂರು: ಎರಡು ದಿನದ ಹಿಂದಷ್ಟೇ ಮೆಟ್ರೋ ನಿಲ್ದಾಣದಲ್ಲಿ ತಾಯಿಯೊಬ್ಬಳು ಮಗುವಿಗೆ ಹಾಲುಣಿಸಲು ಪರದಾಡಿದ್ದ ಘಟನೆಯನ್ನು ಪಬ್ಲಿಕ್ ಟಿವಿ (PUBLiC TV) ವರದಿ ಮಾಡಿತ್ತು. ಈ ಬೆನ್ನಲ್ಲೇ ಘಟನೆ ಬಗ್ಗೆ ಅಲರ್ಟ್ ಆದ ರಾಜ್ಯ ಮಹಿಳಾ ಆಯೋಗ (Karnataka State Commission for Women) ಬಿಎಂಆರ್‌ಎಲ್‌ಗೆ (BMRCL) ಪತ್ರ ಬರೆದು ಆರೈಕೆ ಕೇಂದ್ರ ಸ್ಥಾಪಿಸುವಂತೆ ಸೂಚಿಸಿದೆ.
ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಸಲು ಬಂದ ತಾಯಿಯೊಬ್ಬಳು ತನ್ನ ಮಗುವಿಗೆ ಹಾಲುಣಿಸಲು ಪರದಾಡಿದ್ದ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ಕೂಡ ಸುದ್ದಿ ಬಿತ್ತರಿಸುವ ಮೂಲಕ ಮೆಟ್ರೋ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಿತ್ತು. ಈ ಬೆನ್ನಲ್ಲೇ ಘಟನೆ ಸಂಬಂಧ ರಾಜ್ಯ ಮಹಿಳಾ ಆಯೋಗ ಬಿಎಂಆರ್‌ಎಲ್‌ಗೆ ಪತ್ರ ಬರೆದಿದೆ.ಇದನ್ನೂ ಓದಿ: ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ – ಪರಿಸ್ಥಿತಿ ಉದ್ವಿಗ್ನ
Advertisement
ಸೋಮವಾರ ಟ್ರಿನಿಟಿ ಮೆಟ್ರೋ ನಿಲ್ದಾಣಕ್ಕೆ (Trinity Metro Station) ಬಂದಿದ್ದ ತಾಯಿ ತನ್ನ ಮಗುವಿಗೆ ಹಾಲುಣಿಸಲು ಮೆಟ್ರೋ ನಿಲ್ದಾಣದ ಒಳಭಾಗದಲ್ಲಿ ಪರದಾಡಿದ್ದರು. ಅಕ್ಕಪಕ್ಕದ ಗೋಡೆ ಮರೆಯಲ್ಲಿ ನಿಂತು, ನೆಲದ ಮೇಲೆ ಕೂತು ಪರದಾಡಿದ್ದ ಮಹಿಳೆ ವಿಡಿಯೋ ವೈರಲ್ ಆಗಿತ್ತು. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಆರೈಕೆ ಕೇಂದ್ರವಿದೆ. ಮೆಟ್ರೋ ನಿಲ್ದಾಣಗಳಲ್ಲಿ ಯಾಕೆ ಇಲ್ಲ ಎನ್ನುವ ಪ್ರಶ್ನೆ ಉದ್ಬವ ಆಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ಕೂಡ ಅಧಿಕಾರಿಗಳಿಗೆ ಪ್ರಶ್ನೆಗಳಿಟ್ಟಿತ್ತು. ಈ ಬೆನ್ನಲ್ಲೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ (Nagalakshmi Chowdhary) ಬಿಎಂಆರ್‌ಸಿಎಲ್ ಎಂಡಿಗೆ ಪತ್ರ ಬರೆದು ಕೂಡಲೇ ಆರೈಕೆ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿದ್ದಾರೆ.
Advertisement
Advertisement
ಪತ್ರದಲ್ಲೇನಿದೆ….?
* ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಆರೈಕೆ ಕೇಂದ್ರಗಳು ಈಗಾಗಲೇ ಇವೆ.
* ಆದರಂತೆ ನಮ್ಮ ಮೆಟ್ರೋದಲ್ಲಿ ಮಹಿಳೆಯ ಆರೈಕೆ ಕೇಂದ್ರ ಸ್ಥಾಪನೆ ಆಗಬೇಕು.
* ಸೆ.16 ರಂದು ತಾಯಿಯೊಬ್ಬಳು ಮಗುವಿಗೆ ಹಾಲುಣಿಸಲು ಮೆಟ್ರೋ ಸ್ಟೇಷನ್‌ನಲ್ಲಿ ಪರದಾಡುತ್ತಿರುವ ಸುದ್ದಿ ಪ್ರಸಾರವಾಗಿದೆ.
* ಪ್ರತಿ ಮೆಟ್ರೋ ನಿಲ್ದಾಣಗಳಲ್ಲಿ ಆರೈಕೆ ಕೇಂದ್ರ ನಿರ್ಮಿಸಲು ಕ್ರಮವಹಿಸುವಂತೆ ಪತ್ರ.ಇದನ್ನೂ ಓದಿ: ಮೋದಿ ಅದ್ಭುತ ವ್ಯಕ್ತಿ, ಮುಂದಿನ ವಾರ ಅವರನ್ನ ಭೇಟಿಯಾಗ್ತೀನಿ: ಟ್ರಂಪ್
Advertisement
ಈ ಬಗ್ಗೆ ಮಹಿಳಾ ಆಯೋಗ ಕ್ರಮಕ್ಕೆ ಆಗ್ರಹಿಸಿದೆ. ಕೂಡಲೇ ಮೆಟ್ರೋ ಅಧಿಕಾರಿಗಳು ಈ ಬಗ್ಗೆ ಎಚ್ಚೆತ್ತುಕೊಂಡು ಕ್ರಮ ಕೈಗೊಂಡರೆ ತಾಯಿ ಮತ್ತು ಮಕ್ಕಳ ಪರದಾಟ ತಪ್ಪಲಿದೆ.