ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಾಲಿಕೆ ಕೇಂದ್ರ ಕಚೇರಿ ಡಾ.ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ‘ವಿಶ್ವ ಮಹಿಳಾ ದಿನಾಚರಣೆ’ ಸಮಾರಂಭವನ್ನು ಬಿಬಿಎಂಪಿ ಮುಖ್ತ ಆಯುಕ್ತ ಗೌರವ್ ಗುಪ್ತಾ ಉದ್ಘಾಟಿಸಿದರು.
ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕಿಯರು ಮತ್ತು ಪಾಲಿಕೆಯ ಅಧಿಕಾರಿ ಮತ್ತು ನೌಕರರಿಗೆ ‘ದಿಟ್ಟ ಮಹಿಳಾ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು. ಈ ವೇಳೆ ನಿಮ್ಮ ಹೆಮ್ಮೆಯ ಪಬ್ಲಿಕ್ ಟಿವಿಯ ಇನ್ ಪುಟ್ ಮುಖ್ಯಸ್ಥರಾದ ಅಶ್ವಿನಿಯವರಿಗೆ ದಿಟ್ಟ ಮಹಿಳೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಇದನ್ನೂ ಓದಿ: ಪಬ್ಲಿಕ್ ಟಿವಿ ವತಿಯಿಂದ 10 ಸಾಧಕಿಯರಿಗೆ ನಾರಿ ನಾರಾಯಣಿ ಪಬ್ಲಿಕ್ ಹೀರೋ ವಿಶೇಷ ಪ್ರಶಸ್ತಿ ಪ್ರದಾನ
ಕಾರ್ಯಕ್ರಮದ ನಂತರ ರಕ್ತದಾನ ಶಿಬಿರ ಮತ್ತು ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಯ್ತು. ಬಿಬಿಎಂಪಿ ಗಾಜಿನ ಮನೆ ಆಡಿಟೋರಿಯಂ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿನಿಮಾ, ಕಲೆ, ಸಾಹಿತ್ಯ, ಪೊಲೀಸ್ ಇಲಾಖೆ, ಮಾಧ್ಯಮ, ಸಾಮಾಜಿಕ ಸೇರಿದಂತೆ ಹಲವು ವಿಭಾಗದಲ್ಲಿ ಸಾಧನೆಗೈದ ಮಹಿಳೆಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯ್ತು.
ಕಾರ್ಯಕ್ರಮದಲ್ಲಿ ನಟಿ ಭಾವನ, ಅನು ಪ್ರಭಾಕರ್, ಪ್ರೇಮಾ, ಅಭಿನಯ, ಹಾಗೂ ಪಬ್ಲಿಕ್ ಟಿವಿಯ ಅಶ್ವಿನಿಯವರು ಸೇರಿ ಹಲವು ಸಾಧಕಿಯರಿಗೆ ಸನ್ಮಾನಿಸಲಾಯ್ತು. ಇದನ್ನೂ ಓದಿ: ವಿಧಾನಸಭೆಗೆ ಕುದುರೆ ಏರಿ ಬಂದ ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್