ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರನ್ನಾಗಿ ʼಪಬ್ಲಿಕ್ ಟಿವಿʼ ಸುದ್ದಿವಾಹಿನಿಯ ವಿದ್ಯುನ್ಮಾನ ಮಾಧ್ಯಮದ ರಾಜಕೀಯ ವಿಭಾಗದ ಮುಖ್ಯಸ್ಥರಾದ ಬದ್ರುದ್ದೀನ್ ಕೆ.ಮಾಣಿ ಸೇರಿದಂತೆ ಮೂವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಜೆಸಿಂತ ಅವರು ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಬೆಂಗಳೂರು ವರದಿಗಾರರ ಕೂಟದ ವತಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ಮೂವರು ಸದಸ್ಯರನ್ನು ನೇಮಿಸಿರುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಸ್ಪರ್ಧಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ: ಸಿಎಂ ವಿಶ್ವಾಸ
ಉದಯವಾಣಿ ಪತ್ರಿಕೆಯ ಉಪ ಮುಖ್ಯ ವರದಿಗಾರ ಎಸ್.ಲಕ್ಷ್ಮೀನಾರಾಯಣ, ಸಣ್ಣ ಮತ್ತು ಮಧ್ಯಮ ವರ್ಗಗಳ ಪತ್ರಿಕಾ ವಿಭಾಗದ ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಯ ವಿಶೇಷ ವರದಿಗಾರ ಕೆ.ಎಂ.ಶಿವರಾಜು ಅವರು ಸಹ ಅಕಾಡೆಮಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಇದನ್ನೂ ಓದಿ: ಸಿಎಂಎಸ್‍ಆರ್ ಮೋರೆ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ