ಬೆಂಗಳೂರು: ಪಬ್ಲಿಕ್ ಟಿವಿ ಪ್ರಸ್ತುತಪಡಿಸಿರುವ ವಿದ್ಯಾಪೀಠ 5ನೇ ಆವೃತ್ತಿ ಎಜುಕೇಶನ್ ಎಕ್ಸ್‌ಪೋ ಗೆ ಶುಕ್ರವಾರ ಅದ್ಧೂರಿ ಚಾಲನೆ ದೊರೆತಿದ್ದು, ಮೊದಲ ದಿನವೇ ಯಶಸ್ವಿಯಾಗಿದೆ.
ವಿದ್ಯಾಪೀಠ ಎಕ್ಸ್ಪೋ 5ನೇ ಆವೃತ್ತಿಗೆ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ಮತ್ತು ಮುಖ್ಯ ಅತಿಥಿಗಳು ಚಾಲನೆ ನೀಡಿದರು. ಗಾರ್ಡನ್ ಸಿಟಿ ವಿವಿಯ ಚಾನ್ಸಲರ್ ಡಾ.ವಿ.ಜೆ.ಜೋಸೆಫ್, ರಾಮಯ್ಯ ಕಾಲೇಜ್ ವಿವಿ ಕುಲಪತಿ ಡಾ.ಕುಲದೀಪ್ ರೈನಾ, ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್ಸ್‌ಟಿಟ್ಯೂಟ್‌ನ ಅಧ್ಯಕ್ಷ ರಾಜೀವ್ ಗೌಡ, ನಿತಿನ್ ಮೋಹನ್, ಅದ್ವಿತೀಯ ಉದಯ್ ಭಾಗವಹಿಸಿ, ಮೊದಲ ದಿನದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.
Advertisement
Advertisement
ಸಾವಿರಾರು ವಿದ್ಯಾರ್ಥಿಗಳು ವಿದ್ಯಾಪೀಠ ಕಾರ್ಯಕ್ರಮದಲ್ಲಿ ಭಾಗವಹಿಸಿ ಶೈಕ್ಷಣಿಕ ಮಾಹಿತಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳು, ಪೋಷಕರು ಸಾಗರೋಪಾದಿಯಲ್ಲಿ ಹರಿದುಬಂದರು. ಇದನ್ನೂ ಓದಿ: ವಿದ್ಯಾಪೀಠಕ್ಕೆ ಇಂದು ಚಾಲನೆ – 3 ದಿನಗಳ ಶೈಕ್ಷಣಿಕ ಮೇಳಕ್ಕೆ ಬನ್ನಿ
Advertisement
ಎಕ್ಸ್‌ಪೋ 5ನೇ ಆವೃತ್ತಿಯಲ್ಲಿ 80ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗವಹಿಸಿವೆ. ವಿವಿಧ ಕೋರ್ಸ್‌ಗಳ ಮಾಹಿತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ತಜ್ಞರು, ಸಾಧಕರಿಂದ ಆತ್ಮಸ್ಥೈಯ ಮೂಡಿಸುವ ಉಪನ್ಯಾಸಗಳನ್ನು ನೀಡಲಾಗಿದೆ.
Advertisement
ಮೊದಲ ದಿನ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿ Build Confidence Through Value Based Education ಕುರಿತು ಉಪನ್ಯಾಸ ನೀಡಿದರು. ನಂತರ ಐಎಎಸ್ ಟಾಪರ್‌ಗಳಾದ ರಾಜೇಶ್ ಪೊನ್ನಪ್ಪ ಹಾಗೂ ಅರುಣ ಅವರು ತಮ್ಮ ಸಾಧನೆಯೊಂದಿಗೆ ವಿದ್ಯಾರ್ಥಿಗಳಿಗೆ ಸಲಹೆಗಳನ್ನೂ ನೀಡಿದರು. ಇದೇ ವೇಳೆ ಎಕ್ಸ್‌ಪೋ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲಿ ವಿಜೇತರಾರ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ರಾಜ್ಯದಲ್ಲಿ ಇಂದು 816 ಮಂದಿಗೆ ಕೊರೊನಾ- ಸಾವಿನ ಪ್ರಕರಣ ಶೂನ್ಯ
ಸಿನಿ ತಾರೆಯರಿಂದಲೂ ಶುಭಹಾರೈಕೆ: ಎಕ್ಸ್‌ಪೋ ದಲ್ಲಿ ಭಾಗವಹಿಸಿದ್ದ ನಟ, ನಿರ್ದೇಶಕ ರಿಷಭ್ ಶೆಟ್ಟಿ, ನಟ ರಾಜು ಬಿ.ಶೆಟ್ಟಿ, ನಟಿ ಸುಧಾರಾಣಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಒಟ್ಟಾರೆ ಮೊದಲ ದಿನದ ಎಕ್ಸ್‌ಪೋ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇನ್ನೂ ಎರಡು ದಿನಗಳ ಕಾಲ ಎಕ್ಸ್‌ಪೋ ನಡೆಯಲಿದ್ದು, ಹೆಚ್ಚಿನ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.