ಬೆಂಗಳೂರು: ಪಬ್ಲಿಕ್ ಟಿವಿಯ ರಾಮನಗರದ ಜಿಲ್ಲಾ ವರದಿಗಾರ ಹನುಮಂತು ಇಂದು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ರಾಮನಗರದ ಜಿಲ್ಲಾ ಕಾರಾಗೃಹದ ಬಳಿ ವರದಿ ಮಾಡಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಹಿಂದಿನಿಂದ ಬಂದ ಎಟಿಎಂಗೆ ಹಣ ತುಂಬುವ ವಾಹನ ಹನುಮಂತ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ. ರಾಮನಗರದ ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗಳನ್ನು ಪರಪ್ಪನ ಅಗ್ರಹಾರ ಸ್ಥಳಾಂತರಿಸುವ ಕುರಿತು ತಮ್ಮ ಕೊನೆಯ ವರದಿಯನ್ನು ನೀಡಿದ್ದರು.
ತಮ್ಮ ಪ್ರಾಮಾಣಿಕತೆಯಿಂದಲೇ ಗುರುತಿಸಿಕೊಂಡಿದ್ದ ಹನುಮಂತು, ರಾಮನಗರದಲ್ಲಿ ಚಿರಪರಿಚಿತರು. ತಮ್ಮ ವರದಿಗಳಿಂದಲೇ ಮಾಧ್ಯಮ ಲೋಕದಲ್ಲಿ ಹನುಮಂತು ಗುರುತಿಸಿಕೊಂಡಿದ್ದರು. ಹನುಮಂತು ಕಳೆದುಕೊಂಡು ಪಬ್ಲಿಕ್ ಟಿವಿ ಕುಟುಂಬ ಬಡವಾಗಿದೆ.
ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.
ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ.
1/2 pic.twitter.com/UnU0wvdEke
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 21, 2020
ಇನ್ನು ಹನುಮಂತು ನಿಧನಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸಹ ಸಂತಾಪ ಸೂಚಿಸಿ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ನನಗೆ ಆತ್ಮೀಯರಾಗಿದ್ದ ಹನುಮಂತು ಸಾಮಾಜಿಕ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದ ದಿಟ್ಟ ಪತ್ರಕರ್ತರಾಗಿದ್ದರು.ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದು ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರು.ಅವರ ಕುಟುಂಬದ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ.ಕರ್ತವ್ಯ ನಿರ್ವಹಣೆ ವೇಳೆ ಪ್ರಾಣತೆತ್ತ ಹನುಮಂತು ಅವರ ಆತ್ಮಕ್ಕೆ ಶಾಂತಿ ದಕ್ಕಲಿ.
2/2
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 21, 2020
ರಾಮನಗರದ @publictvnews ವರದಿಗಾರ ಹನುಮಂತು ಅವರ ಅಕಾಲಿಕ ಮರಣ ದುಃಖ ತಂದಿದೆ. ಸದಾ ಕ್ರಿಯಾಶೀಲ, ಉತ್ಸಾಹಿ, ದಿಟ್ಟ ಪತ್ರಕರ್ತರಾಗಿದ್ದ ಅವರು ಪ್ರಾಮಾಣಿತೆಯನ್ನು ನಂಬಿದ್ದರು. ಅಗಲಿಕೆಯ ದುಃಖ ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ.
ಕುಟುಂಬಕ್ಕೆ ವೈಯಕ್ತಿಕವಾಗಿ 5 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುತ್ತೇನೆ.
ಓಂ ಶಾಂತಿ pic.twitter.com/bNO5xbHDqV
— Dr. Ashwathnarayan C. N. (@drashwathcn) April 21, 2020