ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2023-24ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು `ಪಬ್ಲಿಕ್ ಟಿವಿ’ಯ ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥ ರವೀಶ್ ಹೆಚ್‌ಎಸ್ (Ravish HS) ಅವರಿಗೆ ಪ್ರದಾನ ಮಾಡಲಾಯಿತು.ಇದನ್ನೂ ಓದಿ: ಕುಂಭಮೇಳದಲ್ಲಿ ಕಾಲ್ತುಳಿತ – ತಪ್ಪಿತಸ್ಥರ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ
ಸೋಮವಾರ ಬೆಂಗಳೂರಿನ ಐಐಎಸಿಯಲ್ಲಿರುವ ಜೆಎನ್ ಟಾಟಾ ಸಭಾಂಗಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ 2023-24ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಿ ಪ್ರಶಸ್ತಿ ಪ್ರದಾನ ಮಾಡಿದರು.
Advertisement
ಕಳೆದ ತಿಂಗಳ 2ರಂದು ಕರ್ನಾಟಕ ಮಾಧ್ಯಮ ಅಕಾಡೆಮಿಯು 2023-24ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಪ್ರಕಟಗೊಳಿಸಿತ್ತು. ಇಂದು ಒಟ್ಟು 60 ಮಂದಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಇದನ್ನೂ ಓದಿ:ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಭಾರತದಲ್ಲಿ ಕಸ್ಟಮ್ಸ್ ಸುಂಕ ಇಳಿಕೆ!
Advertisement
Advertisement