ಬೆಂಗಳೂರು: ಒಂದೇ ದಿನದಲ್ಲಿ ಬಿಬಿಎಂಪಿ ಡಾಂಬರು ರಸ್ತೆ ಹಾಳಾದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.

ಈ ರಸ್ತೆ ಕಳಪೆ ಕಾಮಗಾರಿಯು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯ ರಾಜ್ಯ ಸರ್ಕಾರದ ವರದಿ ಕೇಳಿದೆ. ಕಳಪೆ ಕಾಮಗಾರಿ ಸಂಬಂಧ ವರದಿ ನೀಡುವಂತೆ ಸಿಎಂ ಕಚೇರಿಯಿಂದ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದೆ. ಸದ್ಯ ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ ನೀರಿನ ಪೈಪ್ ಸೋರಿಕೆಯಿಂದ ರಸ್ತೆ ಕುಸಿದಿರುವುದು ಕಂಡು ಬಂದಿದೆ.


