ಮಡಿಕೇರಿ: ಶುದ್ಧ ಕುಡಿಯುವ ನೀರಿಲ್ಲದೆ (Drinking Water) ಪರದಾಡಿದ್ದ ಕೊಡಗಿನ (Kodagu) ಚಡಾವು ಗ್ರಾಮದ ಜನರಿಗೆ `ಪಬ್ಲಿಕ್ ಟಿವಿ’ ವರದಿ ವರದಾನವಾಗಿ ಪರಿಣಮಿಸಿದೆ.
ಕಳೆದ ಮೂರು ದಿನಗಳ ಹಿಂದೆ `ಪಬ್ಲಿಕ್ ಟಿವಿ’ ಚಡಾವು ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ವರದಿ ಮಾಡಿತ್ತು. ಅಲ್ಲದೇ ಕುಡಿಯಲು ಯೋಗ್ಯವಾಗಿಲ್ಲದ ತೆರದ ಬಾವಿಯ ಬಗ್ಗೆ ಸುದ್ದಿ ಪ್ರಸಾರ ಮಾಡಲಾಗಿತ್ತು. ಸುದ್ದಿ ಪ್ರಸಾರವಾಗುತ್ತಿದ್ದಂತೆ ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತ ಎಚ್ಚೆತ್ತುಕೊಂಡಿದೆ. ಇದನ್ನೂ ಓದಿ: Chandrayaan-3: ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆ ಯಶಸ್ವಿ
ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಡಾವು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಬಗ್ಗೆ ಪಬ್ಲಿಕ್ ಟಿವಿಯ ವರದಿಯನ್ನು ಗಮನಿಸಿ, ನಮ್ಮ ಆಪ್ತ ಕಾರ್ಯದರ್ಶಿಗಳ ಮೂಲಕ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಯಿತು.
ಕೊಡಗು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ (CEO) ಆದೇಶದ… pic.twitter.com/TDJHDOWWC3
— N.S Boseraju (@NsBoseraju) August 18, 2023
ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಗ್ರಾಮಕ್ಕೆ ಶುದ್ಧ ಕುಡಿಯುವ ನೀರನ್ನು ಒದಗಿಸುವಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಒ ಮತ್ತು ಪಿಡಿಒ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತೆರೆದ ಬಾವಿಯನ್ನು ಸ್ವಚ್ಛಗೊಳಿಸಲಾಗಿದ್ದು ನೀರಿನ ಸಮಸ್ಯೆ ಬಗೆಹರಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಾಶ್ವತ ಕುಡಿಯುವ ನೀರಿನ ಪರಿಹಾರಕ್ಕಾಗಿ ಆರ್‌ಡಬ್ಲ್ಯೂಎಸ್ ಎಂಜಿನಿಯರ್ ಮೂಲಕ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಲವು ವರ್ಷಗಳಿಂದ ನೀರಿನ ಸಮಸ್ಯೆಯಿಂದ ಪರದಾಡಿದ್ದ ಜನ `ಪಬ್ಲಿಕ್ ಟಿವಿ’ಗೆ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ರಾಜ್ಯದ ಸೂಪರ್ ಸಿಎಂ, ಸಿದ್ದರಾಮಯ್ಯರನ್ನ ಮುಗಿಸುವ ಎಲ್ಲ ಪ್ಲ್ಯಾನ್ ಮಾಡಿದ್ದಾರೆ: ಯತ್ನಾಳ್ ಬಾಂಬ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]