ತುಮಕೂರು: ‘ಪಬ್ಲಿಕ್ ಟಿವಿ’ಯ (PUBLiC TV) ಮೈಸೂರು ಜಿಲ್ಲಾ ವರದಿಗಾರ ಕೆ.ಪಿ ನಾಗರಾಜ್ (KP Nagaraj) ಅವರು ರಾಜ್ಯಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ವಿದ್ಯುನ್ಮಾನ ವಿಭಾಗದಲ್ಲಿ ಅತ್ಯುತ್ತಮ ಸಾಮಾಜಿಕ ಹಾಗೂ ಮಾನವೀಯ ವರದಿಗಾಗಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದಿದ್ದಾರೆ. ತುಮಕೂರಿನಲ್ಲಿ (Tumakuru) ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಜೊತೆಗೆ ಪಬ್ಲಿಕ್ ಟಿವಿ ತುಮಕೂರು ಜಿಲ್ಲಾ ಪ್ರತಿನಿಧಿ ಮಂಜುನಾಥ ತಾಳಮಕ್ಕಿ ರಾಜ್ಯ ಸಮ್ಮೇಳದ ಖಜಾಂಚಿಯಾಗಿ, ಪ್ರಚಾರ ಸಮಿತಿ, ಸ್ವಾಗತಸಮಿತಿ ಪ್ರಮುಖರಾಗಿ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡಿದ್ದಕ್ಕೆ ರಾಜ್ಯ ಸಮ್ಮೇಳನದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಇದನ್ನೂ ಓದಿ: Kodagu | ಹುಲಿ ದಾಳಿಗೆ ಎರಡು ಹಸುಗಳು ಬಲಿ
ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಜೆಡಿಎಲ್‌ಪಿ ನಾಯಕ ಸುರೇಶ್ ಬಾಬು ಹಾಜರಿದ್ದರು. ಇದನ್ನೂ ಓದಿ: ರಾಜ್ಯಕ್ಕೆ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧ – ಜೋಶಿ