‘ಪಬ್ಲಿಕ್ ಟಿವಿ’ಯ ಸುಕೇಶ್‌ಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರದಾನ

Public TV
1 Min Read
d.h.sukesh public tv

ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ‘ಪಬ್ಲಿಕ್ ಟಿವಿ’ ರಾಜಕೀಯ ವರದಿಗಾರ ಡಿ.ಹೆಚ್.ಸುಕೇಶ್ (Sukesh) ರವರಿಗೆ ಅತ್ಯುತ್ತಮ ರಾಜಕೀಯ ವಿಶ್ಲೇಷಣೆಗಾಗಿ ‘ಖಾದ್ರಿ ಶಾಮಣ್ಣ’ (Khadri Shamanna Award) ಪ್ರಶಸ್ತಿ ಪ್ರದಾನ ಮಾಡಲಾಯಿತು.

sukesh public tv

ದಾವಣಗೆರೆಯಲ್ಲಿ ನಡೆದ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ್ದು, ಪ್ರಸ್ತುತ ರಾಜಕೀಯ ಬೆಳವಣಿಗಳ ಬಗ್ಗೆ ಅತ್ಯುತ್ತಮವಾಗಿ ವಿಶ್ಲೇಷಣೆ ನೀಡಿದ ಹಿನ್ನೆಲೆ ಪಬ್ಲಿಕ್ ಟಿವಿ ರಾಜಕೀಯ ವರದಿಗಾರ ಡಿ.ಹೆಚ್.ಸುಖೇಶ್ ಅವರಿಗೆ ವಿಧಾನ ಪರಿಷತ್‌ನ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. ಇದನ್ನೂ ಓದಿ: ಪಬ್ಲಿಕ್‌ ಟಿವಿಯ ಸುಕೇಶ್‌ಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

ಅಲ್ಲದೆ ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದು, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಂಸದ ಜಿಎಂ ಸಿದೇಶ್ವರ್, ಸೇರಿದಂತೆ ಹಲವರು ಭಾಗಿಯಾಗಿದ್ದರು.

Share This Article