ಬೀದರ್: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 60 ವರ್ಷ ಕಳೆದರೂ ಇನ್ನೂ ಗ್ರಾಮೀಣ ಪ್ರದೇಶಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಎನ್ನುವ ಸುದ್ದಿಗೆ ಹಳ್ಳಿ ಸಾಕ್ಷಿಯಾಗಿದೆ. ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ನೀಲಂಹಳ್ಳಿ ಗ್ರಾಮದಲ್ಲಿ 1,300 ಮಂದಿ ವಾಸವಾಗಿದ್ದು, ಸರಿಯಾದ ರಸ್ತೆ ಇಲ್ಲದೇ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿದಿದ್ದಾರೆ.
Advertisement
ಗ್ರಾಮದ ಜನರಿಗೆ ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳೇ ಇಲ್ಲ. ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಿಗೆ ಹೋಗಬೇಕಾದರೆ ನಡೆದುಕೊಂಡೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಗ್ರಾಮದ ಮಕ್ಕಳು ಶಾಲೆಗೆ ಹೋಗಬೇಕಾದರೆ 4 ರಿಂದ 5 ಕಿಲೋ ಮೀಟರ್ ದೂರ ಕಡಿದಾದ ಕಾಲುದಾರಿಯಲ್ಲಿ ನಡೆದು ಸಾಗಬೇಕಿದೆ.
Advertisement
ಈ ಹಿಂದೆ ಕುಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ್ದರೂ ಸದ್ಯ ಗ್ರಾಮದ ರಸ್ತೆ ಸಂಪೂರ್ಣ ಹಾಳಾಗಿ ಕಚ್ಚಾ ರಸ್ತೆಯಾಗಿ ಮಾರ್ಪಟ್ಟಿದೆ. ರಸ್ತೆ ದುರಸ್ಥಿಗಾಗಿ ಅಧಿಕಾರಿಗಳು, ಜನಪ್ರತಿನಿಧಿಗಳ ಬಳಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೇ ಧನ್ನೂರು – ರುದ್ಧನೂರ್ – ನೀಲಂಹಳ್ಳಿ ಮೂಲಕ ಮುಖ್ಯ ರಸ್ತೆಗೆ ಸಂಪರ್ಕವಾಗುವ ರಸ್ತೆಯನ್ನು ರಾಜಕೀಯ ವ್ಯಕ್ತಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಮನೆಗಳನ್ನು ನಿರ್ಮಾಣ ಮಾಡಿದ್ದಾರೆ.
Advertisement
Advertisement
ಇತ್ತ ಗ್ರಾಮದಲ್ಲಿ ಸಮಸ್ಯೆಗಳಿದ್ದರೂ ರಸ್ತೆ ಒತ್ತುವರಿ ತೆರವುಗೊಳಿಸಿ ಗ್ರಾಮಸ್ಥರ ನೆರವಿಗೆ ಬರಬೇಕಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸ್ಥಳೀಯ ಶಾಸಕರೂ ಆದ ಈಶ್ವರ್ ಖಂಡ್ರೆ ಮೌನಕ್ಕೆ ಶರಣಾಗಿದ್ದಾರೆ. ಜನಪ್ರತಿನಿಧಿಗಳ ಹಾಗು ಅಧಿಕಾರಿಗಳಿಗೆ ನಿರ್ಲಕ್ಷ್ಯಕ್ಕೆ ಈ ಗ್ರಾಮದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸದ್ಯ ಇಲ್ಲಿನ ಗ್ರಾಮಸ್ಥರು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೂಲಕ ರಸ್ತೆ ಮಾಡಿಸಿಕೊಡಿ ಎಂದು ಮನವಿ ಮಾಡಿದ್ದಾರೆ.
https://www.youtube.com/watch?v=QorJplaN5-w
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com