ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಇಂದು ಚಾಲನೆ – ಇಂದಿನ ಕಾರ್ಯಕ್ರಮಗಳು ಏನು?

Public TV
2 Min Read
PUBLIC TV VIDHYAPEETA 2021 1 main

 ಬೆಂಗಳೂರು: ಎರಡು ದಿನಗಳ ಕಾಲ ಪಬ್ಲಿಕ್ ಟಿವಿ ಆಯೋಜಿಸಿರುವ ಮೆಗಾ ಶೈಕ್ಷಣಿಕ ಉತ್ಸವ `ವಿದ್ಯಾಪೀಠ’ಕ್ಕೆ ಇಂದು ಅರಮನೆ ಮೈದಾನದಲ್ಲಿ ಚಾಲನೆ ಸಿಗಲಿದೆ.

ಈಗಿನ ಶಿಕ್ಷಣದ ಹೊಸ ಟ್ರೆಂಡ್ ಏನು? ಎಸ್‍ಎಸ್‍ಎಲ್‍ಸಿ, ಪಿಯುಸಿಯ ನಂತರ ಯಾವ ಕಾಲೇಜಿನಲ್ಲಿ ಯಾವ ಕೋರ್ಸ್ ಇದೆ? ಈ ಕೋರ್ಸ್‍ಗಳಿಗೆ ಎಷ್ಟು ಶುಲ್ಕ ಇರುತ್ತದೆ? ಈ ಕಾಲೇಜುಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಇದ್ಯಾ?…ಈ ರೀತಿಯ ಪ್ರಶ್ನೆಗಳು ಪೋಷಕರಿಗೆ, ವಿದ್ಯಾರ್ಥಿಗಳಿಗೆ ಬರುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ‘ವಿದ್ಯಾಪೀಠ’ದಲ್ಲಿ ಸುಲಭವಾಗಿ ಉತ್ತರ ಸಿಗಲಿದೆ.

PUBLIC TV VIDHYAPEETA 2021 1

ಯಾರೆಲ್ಲ ಭಾಗವಹಿಸುತ್ತಾರೆ?
ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್, ಆರ್ಕಿಟೆಕ್ಚರ್, ಕಾಮರ್ಸ್ ಮತ್ತು ಬ್ಯಾಂಕಿಂಗ್ ಸಂಸ್ಥೆಗಳು, ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು, ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು, ಸಮೂಹ ಸಂವಹನ, ಎಂಬಿಎ ಇನ್‍ಸ್ಟಿಟ್ಯೂಷನ್, ವಿದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು.  ಇದನ್ನೂ ಓದಿ: ಡೆಲ್ಲಿ ನಾಯಕನಾಗಿ ಪಂತ್ ಮುಂದುವರಿಕೆ 

ಯಾರೆಲ್ಲ ಆಗಮಿಸಬಹುದು?
ಕೌನ್ಸೆಲರ್‌ಗಳು, ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪಿಯುಸಿ ವಿದ್ಯಾರ್ಥಿಗಳು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು.

PUBLIC TV VIDHYAPEETA 2021 3

ದಿನಾಂಕ : ಸೆಪ್ಟೆಂಬರ್‌ 18, 19
ಸ್ಥಳ : ಗಾಯತ್ರಿ ವಿಹಾರ್, ಅರಮನೆ ಮೈದಾನ, ಬೆಂಗಳೂರು
ಸಮಯ : ಬೆಳಗ್ಗೆ 9:30 ರಿಂದ ಸಂಜೆ 6.00 ಗಂಟೆಯವರೆಗೆ

ಶನಿವಾರ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಬ್ಲಿಕ್‌ ಟಿವಿ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ ಜೊತೆ ಮುಖ್ಯ ಅತಿಥಿಗಳಾಗಿ ರೇವಾ ವಿಶ್ವವಿದ್ಯಾಲಯದ ಕುಲಪತಿ ಶ್ಯಾಮರಾಜು, ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಕುಲಪತಿ ಡಾ.ವಿ.ಜಿ.ಜೋಸೆಫ್, ಕೇಂಬ್ರಿಡ್ಜ್ ಸಮೂಹ ಸಂಸ್ಥೆಯ ಮುಖ್ಯಸ್ಥ ಡಿ.ಕೆ.ಮೋಹನ್, ಆಚಾರ್ಯ ಸಂಸ್ಥೆಗಳ ಕಾರ್ಪೊರೇಟ್ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶಕ ವಿಶೇಷ ಚಂದ್ರಶೇಖರ್ ಭಾಗವಹಿಸಲಿದ್ದಾರೆ.

PUBLIC TV VIDHYAPEETA 2021 222

ಶನಿವಾರದ ಕಾರ್ಯಕ್ರಮಗಳು ಏನು?
ಬೆಳಗ್ಗೆ 11:30 ರಿಂದ 12 ಗಂಟೆಯವರೆಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ್‌ ಅವರು “ರಾಷ್ಟ್ರೀಯ ಶಿಕ್ಷಣ ನೀತಿ – 2020: ಸಮಗ್ರ ವಿಧಾನ ಮತ್ತು ಅನುಷ್ಠಾನ”ದ ಬಗ್ಗೆ ಮಾತನಾಡಲಿದ್ದಾರೆ.

ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಸಿಇಟಿ ಮತ್ತು ಕಾಮೆಡ್‌ಕೆ ಬಗ್ಗೆ ವಿಚಾರಗೋಷ್ಠಿ ನಡೆಯಲಿದೆ. ಈ ಗೋಷ್ಠಿಯಲ್ಲಿ ಕಾಮೆಡ್‌ ಕೆ ಕಾರ್ಯದರ್ಶಿ ಕುಮಾರ್‌ ಮತ್ತು ಸಿಇಟಿ ವಿಭಾಗದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಕಾಲಿಗೆ ಹಾಕೋ ಚಪ್ಪಲಿಗೆ ಗ್ಯಾರಂಟಿ ಕೇಳ್ತೀವಿ, ಲಸಿಕೆಗೆ ಗ್ಯಾರಂಟಿ ಬೇಡ್ವಾ: ಅಧಿಕಾರಿಗಳಿಗೆ ಯುವಕನ ಪ್ರಶ್ನೆ

ಮಧ್ಯಾಹ್ನ ಭೋಜನದ ಬಳಿಕ 2 ರಿಂದ 2:45ರವರೆಗೆ ನಟ, ಯೂಥ್ ಐಕಾನ್ ರಮೇಶ್‌ ಅರವಿಂದ್‌ “ಯಶಸ್ಸಿನ ರಹಸ್ಯ”ದ ಬಗ್ಗೆ ಮಾತನಾಡಲಿದ್ದಾರೆ.

ಮಧ್ಯಾಹ್ನ 3 ರಿಂದ 3:45ರವರೆಗೆ “ನ್ಯೂ ಏಜ್‌ ಪ್ರೋಗ್ರಾಮ್ಸ್‌” ಬಗ್ಗೆ ಸಂವಾದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಟಿಯು ಕಾರ್ಯಕಾರಿ ಸಮಿತಿ ಸದಸ್ಯ ಡಾ.ರವಿಶಂಕರ್‌, ಬೆಂಗಳೂರು ವಿಶ್ವವಿದ್ಯಾಲಯದ ವೇಣು ಗೋಪಾಲ್ ಕೆ.ಆರ್, ಕೇಂಬ್ರಿಡ್ಜ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಿ.ಕೆ. ಮೋಹನ್ ಭಾಗವಹಿಸಲಿದ್ದಾರೆ. ಡಾ.ಕಿರಣ್ ಮಾಗಾವಿ ಅವರು ಸಂವಾದವನ್ನು ನಡೆಸಿಕೊಡಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *