ಬೆಂಗಳೂರು: ಎಲ್ಲಕ್ಕಿಂತ ಮಿಗಿಲಾದ ಸಂಪತ್ತು, ಯಾರಿಂದಲೂ ಕದಿಯಲಾಗದ ವಸ್ತು ಯಾವುದು ಎಂದರೆ ಅದು ವಿದ್ಯೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ಕುಟುಂಬಕ್ಕೆ ಒಳ್ಳೆದಾಗುತ್ತದೆ ಎಂಬ ಕಾರಣಕ್ಕೆ ಈಗ ಪೋಷಕರು ಮಕ್ಕಳ ಶಿಕ್ಷಣಕ್ಕೆ ಹಿಂದೆಂದಿಗಿಂತಲೂ ಭಾರೀ ಹಣವನ್ನು ವಿನಿಯೋಗಿಸುತ್ತಿದ್ದಾರೆ. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ಬಯಸಿದ್ದರೂ ಗುಣಮಟ್ಟದ ಶಿಕ್ಷಣ ಎಲ್ಲಿ ಸಿಗುತ್ತದೆ ಎನ್ನುವುದು ಬಹಳ ಕಷ್ಟ. ಈ ಕಷ್ಟವನ್ನು ನಿವಾರಿಸಲು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ನಿಮ್ಮ ಪಬ್ಲಿಕ್ ಟಿವಿ ವಿದ್ಯಾಪೀಠ (PUBLiC TV Vidhyapeeta) ಶೈಕ್ಷಣಿಕ ಮೇಳವನ್ನು ಆಯೋಜಿಸಿದೆ.
ದ್ವಿತೀಯ ಪಿಯುಸಿ (Second PUC), ಪದವಿ (Degree) ಮುಗಿದ ನಂತರ ಮಕ್ಕಳನ್ನು ಯಾವ ಕಾಲೇಜಿಗೆ ಸೇರಿಸಬೇಕು? ಯಾವ ಕೋರ್ಸ್‌ಗೆ ಸೇರಿಸಿದರೆ ಸೂಕ್ತ? ಯಾವ ಕಾಲೇಜಿನಲ್ಲಿ ಶುಲ್ಕ ಎಷ್ಟಿರುತ್ತೆ ಇತ್ಯಾದಿ ಗೊಂದಲ ಪೋಷಕರಲ್ಲಿ ಇರುವುದು ಸಹಜ. ಈ ಬಗ್ಗೆ ಸರಿಯಾದ ಮಾಹಿತಿ ನೀಡಲು ಒಂದೇ ಸೂರಿನಡಿ ಸೂಕ್ತ ವೇದಿಕೆ ಕಲ್ಪಿಸಿ, ಗೊಂದಲ ನಿವಾರಣೆಗಾಗಿ ಪಬ್ಲಿಕ್ ಟಿವಿಯ 7ನೇ ಆವೃತ್ತಿಯ ವಿದ್ಯಾಪೀಠ ಶೈಕ್ಷಣಿಕ ಮೇಳ ಇದೇ ಏಪ್ರಿಲ್ 27 (ಶನಿವಾರ), ಏಪ್ರಿಲ್ 28(ಭಾನುವಾರ) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ (ಗೇಟ್ ನಂಬರ್ 4) ನಡೆಯಲಿದೆ. ಇದನ್ನೂ ಓದಿ: ಲಿಂಗಸುಗೂರಿನಲ್ಲಿ ನಕಲಿ ನೋಟು ಜಾಲ ಪತ್ತೆ – 500 ರೂ. ಮುಖಬೆಲೆಯ 62 ಬಂಡಲ್ ಜಪ್ತಿ
Advertisement
Advertisement
ʼಇಂದಿನ ಕಲಿಕೆ, ನಾಳಿನ ದಾರಿ ದೀಪ’ ಎಂಬ ಘೋಷವಾಕ್ಯದೊಂದಿಗೆ ಆ್ಯಡ್6 ಸಹಯೋಗದಲ್ಲಿ ಆಯೋಜನೆಗೊಂಡಿರುವ ವಿದ್ಯಾಪೀಠ ಶೈಕ್ಷಣಿಕ ಮೇಳ ಬೆಳಗ್ಗೆ 9 ರಿಂದ ಸಂಜೆ 7 ಗಂಟೆವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶವಿರುತ್ತದೆ.
Advertisement
110ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗಿ: ಕರ್ನಾಟಕದ (Karnataka) ಅತಿ ದೊಡ್ಡ ಶೈಕ್ಷಣಿಕ ಮೇಳ ವಿದ್ಯಾಪೀಠದಲ್ಲಿ ರಾಜ್ಯದ ನಾನಾ ಭಾಗಗಳ 110ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪದವಿ, ಸ್ನಾತಕೋತ್ತರ ಪದವಿ, ಕೆಸಿಇಟಿ, ನೀಟ್ ಮತ್ತು ಕಾಮೆಡ್ ಕೆ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.
Advertisement
ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್ ಆರ್ಕಿಟೆಕ್ಚರ್, ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳು, ವಾಣಿಜ್ಯ ಮತ್ತು ಬ್ಯಾಂಕಿಂಗ್, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳು, ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‌ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು, ಸಮೂಹ ಸಂವಹನ, ಎಂಬಿಎ ಸಂಸ್ಥೆಗಳು ವಿದ್ಯಾಪೀಠದಲ್ಲಿ ಭಾಗಿಯಾಗುತ್ತಿದ್ದಾರೆ.
ಮತದಾನ ಮಾಡಿ, ಉಡುಗೊರೆ ಪಡೆಯಿರಿ
ಶೈಕ್ಷಣಿಕ ಮೇಳದಲ್ಲಿ ಸೆಮಿನಾರ್ ಸೇರಿದಂತೆ ಹಲವು ಕಾರ್ಯಕ್ರಮಗಳು ಇರಲಿವೆ. ಲಕ್ಕಿ ಡ್ರಾ ಮೂಲಕ ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು. ಅದರಲ್ಲೂ ವಿಶೇಷವಾಗಿ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿ ಮತ ಚಲಾವಣೆ ಮಾಡಿದ ವಿದ್ಯಾರ್ಥಿಗಳಿಗೆ ಆಕರ್ಷಕ ಉಡುಗೊರೆ ಸಿಗಲಿದೆ.
ಚಿನ್ನದ ನಾಣ್ಯ, ಸೈಕಲ್ ಉಡುಗೊರೆ:
ವಿವಿಧ ಸ್ಪರ್ಧೆಯಲ್ಲಿ ಗೆದ್ದ ವಿಜೇತರಿಗೆ ಚಿನ್ನದ ನಾಣ್ಯ ಹಾಗೂ ಬೈಸಿಕಲ್ ಸೇರಿದಂತೆ ವಿಶೇಷ ಉಡುಗೊರೆ ನೀಡಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅಂಕಪಟ್ಟಿಯ ಫೋಟೋಕಾಪಿ ತಂದು ತೋರಿಸಿದ್ದಲ್ಲಿ ಅವರಿಗೂ ಉಡುಗೊರೆ ಸಿಗಲಿದೆ.
ಪ್ಲಾಟಿನಂ ಪ್ರಾಯೋಜಕರು:
ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸ್, ಕೇಂಬ್ರಿಡ್ಜ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಿಎಂಆರ್ ಯೂನಿವರ್ಸಿಟಿ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಗಾರ್ಡನ್ ಸಿಟಿ ಯೂನಿವರ್ಸಿಟಿ, ರೇವಾ ಯೂನಿವರ್ಸಿಟಿ.
ಗೋಲ್ಡ್ ಪ್ರಾಯೋಜಕರು:
ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಎಂಜಿನಿಯರಿಂಗ್, ಎಸ್‌ಜೆಬಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಪ್ತಗಿರಿ ಎನ್‌ಪಿಎಸ್ ಯೂನಿವರ್ಸಿಟಿ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್, ಎಎಂಸಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್.
ಕ್ರಿಯೇಟಿವ್ ಸ್ಟಾಲ್ ಪಾರ್ಟ್ನರ್ಸ್:
ರಾಮಯ್ಯ ಇನ್‌ಸ್ಟಿಟಯೂಟ್ ಆಫ್ ಟೆಕ್ನಾಲಜಿ, ಎಸ್‌ವಿಸಿಇ (ಶ್ರೀ ವೆಂಕಟೇಶ್ವರ ಕಾಲೇಜ್ ಆಫ್ ಇಂಜಿನಿಯರಿಂಗ್) ಬೆಂಗಳೂರು, ಪ್ರೆಸಿಡೆನ್ಸಿ ಯೂನಿರ್ವಸಿಟಿ, ನ್ಯೂ ಹಾರಿಜನ್ ಕಾಲೇಜ್ ಆಫ್ ಇಂಜಿನಿಯರಿಂಗ್, ಕೆಎಲ್‌ಇ ಟೆಕ್ನಾಲಜಿ ಯೂನಿವರ್ಸಿಟಿ, ICFAI ಫೌಂಡೇಶನ್ ಫಾರ್ ಹೈಯರ್ ಎಜುಕೇಶನ್.
ಸಿಲ್ವರ್ ಪ್ರಾಯೋಜಕರು:
ಏಮ್ಸ್ ಇನ್‌ಸ್ಟಿಟ್ಯೂಟ್, ಆರ್‌ಆರ್ ಇನ್‌ಸ್ಟಿಟ್ಯೂಷನ್ಸ್, ಪಿಇಎಸ್ ಯೂನಿವರ್ಸಿಟಿ, ದಯಾನಂದ ಸಾಗರ್ ಯೂನಿವರ್ಸಿಟಿ, SEA ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ಅಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೃಂದಾವನ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ಚಾಣಾಕ್ಯ ಯುನಿವರ್ಸಿಟಿ, ಅಚಾರ್ಯ ಬೆಂಗಳೂರು ಬಿ ಸ್ಕೂಲ್, ಕೃಪಾನಿಧಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, GMಯೂನಿವರ್ಸಿಟಿ.
ಬ್ಯಾಂಕಿಂಗ್ ಪಾರ್ಟ್‌ನರ್
ಕೆನರಾ ಬ್ಯಾಂಕ್
ಬೆವರೇಜ್ ಪಾರ್ಟ್‌ನರ್
ನಂದಿನಿ – ಕೆಎಂಎಫ್, ಬಾಯರ್ಸ್ ಕಾಫಿ, ಸ್ಪ್ರಿಂಗ್ಸ್ ಫುಡ್ ಆಂಡ್ ಬೆವರೇಜಸ್ ಪ್ರೈ. ಲಿ.
ಗಿಫ್ಟ್ ಸ್ಪಾನ್ಸರ್
ಜೀನಿ ಮಿಲೆಟ್ ಮಿಕ್ಸ್, ಆಡ್ ಜೆಲ್
ದಿನಾಂಕ: ಏಪ್ರಿಲ್ 27 ಮತ್ತು 28
ಸ್ಥಳ: ಗಾಯತ್ರಿ ವಿಹಾರ, ಅರಮನೆ ಮೈದಾನ, ಬೆಂಗಳೂರು
ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 99000 60815/ 99000 60891