ಬೆಂಗಳೂರು: ಪಬ್ಲಿಕ್ ಟಿವಿ (PUBLiC TV) ಆಯೋಜಿಸಿದ ವಿದ್ಯಾಪೀಠ (Vidhyapeeta) ಕಾರ್ಯಕ್ರಮಕ್ಕೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು ಎರಡನೇ ದಿನ ಭಾರೀ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗಿಯಾಗಿದ್ದಾರೆ.
ಇಂದು ಭಾನುವಾರ ಆಗಿರುವ ಕಾರಣ ಅರಮನೆ ಮೈದಾನದ ಗೇಟ್ 4 ರಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮೇಳಕ್ಕೆ (Education Expo) ಬೆಳಗ್ಗೆಯಿಂದಲೇ ವಿದ್ಯಾರ್ಥಿಗಳು ಆಗಮಿಸಿ ಕಾಲೇಜು, ಕೋರ್ಸ್‌ಗಳ ಬಗ್ಗೆ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಇದನ್ನೂ ಓದಿ: ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮೋದಿ
ಶನಿವಾರದಿಂದ ಆರಂಭವಾಗಿರುವ ವಿದ್ಯಾಪೀಠ ಇಂದು ಸಂಜೆ 6 ಗಂಟೆಗೆ ಕೊನೆಯಾಗಲಿದೆ. ಹೀಗಾಗಿ ಈ ಶೈಕ್ಷಣಿಕ ಮೇಳ ಕೊನೆಯಾಗಲು ಕೆಲವೇ ಗಂಟೆಗಳು ಬಾಕಿ ಇದ್ದು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ಪಬ್ಲಿಕ್ ಟಿವಿ ಮನವಿ ಮಾಡುತ್ತಿದೆ. ಇದನ್ನೂ ಓದಿ: ಭಾರತ ಕೊಟ್ಟ ಶಾಕ್‌ಗೆ ತತ್ತರ – ನೆರೆ ತುರ್ತು ಪರಿಸ್ಥಿತಿ ಘೋಷಿಸಿದ ಪಾಕ್
ರಾಜ್ಯದ 120ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಕರ್ನಾಟಕದ ಅತಿ ದೊಡ್ಡ ಶೈಕ್ಷಣಿಕ ಮೇಳದಲ್ಲಿ ಪಾಲ್ಗೊಂಡಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶ ಇದೆ. ಈ ಶೈಕ್ಷಣಿಕ ಮೇಳದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಕೆಸೆಟ್, ನೀಟ್ ಮತ್ತು ಕಾಮೆಡ್ ಕೆ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‍ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ.