ಬೆಂಗಳೂರು: ಮಲ್ಲೇಶ್ವರದ ಸರ್ಕಾರಿ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಪಬ್ಲಿಕ್ ಟಿವಿ (PUBLiC TV) ವಿದ್ಯಾಮಂದಿರ ((VidhyaMandira) ಮೆಗಾ ಎಜುಕೇಷನ್ ಎಕ್ಸ್‌ಪೋಗೆ ಮೊದಲ ದಿನ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು ಇಂದು ಸಂಜೆ ಈ ಕಾರ್ಯಕ್ರಮ ಕೊನೆಯಾಗಲಿದೆ.
ಡಿಗ್ರಿ ಮುಗಿದ ಮೇಲೆ ಯಾವ ಕೋರ್ಸ್ ಮಾಡಬೇಕು? ಸ್ನಾತಕೋತ್ತರ ಪದವಿಯನ್ನ (Post Graduation) ಯಾವ ಕಾಲೇಜಿನಲ್ಲಿ ಮಾಡಬಹುದು? ಯಾವ ಕ್ಷೇತ್ರ ತೆಗೆದುಕೊಂಡರೆ ಒಳ್ಳೆಯದು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುವ ನಿಟ್ಟಿನಲ್ಲಿ ಪಬ್ಲಿಕ್ ಟಿವಿ ವಿದ್ಯಾಮಂದಿರ ಎರಡನೇ ಆವೃತ್ತಿಯನ್ನು ಆಯೋಜನೆ ಮಾಡಿದೆ. ಇದನ್ನೂ ಓದಿ: ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುವ ನಮ್ಮ ಬಲವನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು: ಹೆಚ್.ಆರ್ ರಂಗನಾಥ್
ಪ್ರಬ್ಲಿಕ್ ಟಿವಿ ಪ್ರಸ್ತುತ ಪಡಿಸುವ Ad6 ಸಹಯೋಗದಲ್ಲಿ ಈ ಶೈಕ್ಷಣಿಕ ಮೇಳ ಮಲ್ಲೇಶ್ವರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯತ್ತಿದೆ. ಬೆಳಗ್ಗೆ 9 ರಿಂದ ಆರಂಭಗೊಂಡು ಸಂಜೆ 6:30ಕ್ಕೆ ಅಂತ್ಯವಾಗಲಿದೆ. ಒಂದೇ ಸೂರಿನಡಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳಿದ್ದು, ಶನಿವಾರ ಬೆಳಗ್ಗೆಯಿಂದಲೇ ಸಾವಿರಾರು ವಿದ್ಯಾರ್ಥಿಗಳು ಪೋಷಕರೊಂದಿಗೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಅವಕಾಶ ಇದೆ.
ಇಂದು ವಿಶೇಷ ಸೇಮಿನಾರ್‌ಗಳ ಜೊತೆಗೆ ವಿದ್ಯಾರ್ಥಿಗಳಿಗೆ ಚರ್ಚೆ ಸ್ಪರ್ಧೆ ಸಹ ನಡೆಯಲಿದೆ. ಸ್ಪರ್ಧೆಯಲ್ಲಿ ವಿಜೇತರಾಗುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಪೋನ್ ಬಹುಮಾನವಾಗಿ ಸಿಗಲಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]