ಪಬ್ಲಿಕ್ ಟಿವಿ ಮೆಗಾ ಶೈಕ್ಷಣಿಕ ಉತ್ಸವ ವಿದ್ಯಾಪೀಠಕ್ಕೆ ನಾಳೆ ಚಾಲನೆ

Public TV
2 Min Read
vidhyapeeta 2

ಬೆಂಗಳೂರು: ಪಬ್ಲಿಕ್ ಟಿವಿ ಆಯೋಜಿಸುತ್ತಿರುವ ನಾಲ್ಕನೇ ಆವೃತ್ತಿಯ ವಿದ್ಯಾಪೀಠ ಮೆಗಾ ಶೈಕ್ಷಣಿಕ ಉತ್ಸವಕ್ಕೆ ನಾಳೆ ಚಾಲನೆ ಸಿಗಲಿದೆ.

ಈ ಹಿಂದೆ ಆಯೋಜಿಸಿದ ಮೂರು ಮೆಗಾ ಶೈಕ್ಷಣಿಕ ಉತ್ಸವಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ಸಿಕ್ಕಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಮತ್ತು ಭಾನುವಾರ ನಾಲ್ಕನೇ ಆವೃತ್ತಿಯ ವಿದ್ಯಾಪೀಠ ಕಾರ್ಯಕ್ರಮ ನಡೆಯುಲಿದೆ.

ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿ ಪದವಿ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯಮಿಕ ಕೋರ್ಸ್ ಗಳ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

PUBLIC TV VIDHYAPEETA 2021 1

ಈ ವೇಳೆ ಕೆಸಿಇಟಿ, ನೀಟ್‌ ಮತ್ತು ಕಾಮೆಡ್‌ ಕೆ ಪರೀಕ್ಷೆಗಳಿಗಾಗಿ ಕೆಇಎ ಅಧಿಕಾರಿಗಳಿಂದ ಆಪ್ತ ಸಮಾಲೋಚನೆ, ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಅವಕಾಶವಿದೆ. ಅಷ್ಟೇ ಅಲ್ಲದೇ ಎರಡೂ ದಿನ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಅರ್ಧಗಂಟೆ ಉಪನ್ಯಾಸ ನಡೆದ ಬಳಿಕ 15 ನಿಮಿಷ ಪ್ರಶ್ನೋತ್ತರಕ್ಕೂ ಅವಕಾಶವಿದೆ. ಈ ಕಾರ್ಯಕ್ರಮದಲ್ಲಿ ಪಿಯುಸಿಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ. ಇದನ್ನೂ ಓದಿ: ಬೈಕ್‍ಗಳಲ್ಲಿ ಐಫೋನ್ ಬಳಸಬೇಡಿ – ಗ್ರಾಹಕರಿಗೆ ಆಪಲ್ ಎಚ್ಚರಿಕೆ

ಯಾರೆಲ್ಲ ಭಾಗವಹಿಸುತ್ತಾರೆ?
ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್, ಆರ್ಕಿಟೆಕ್ಚರ್, ಕಾಮರ್ಸ್ ಮತ್ತು ಬ್ಯಾಂಕಿಂಗ್ ಸಂಸ್ಥೆಗಳು, ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು, ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು, ಸಮೂಹ ಸಂವಹನ, ಎಂಬಿಎ ಇನ್‍ಸ್ಟಿಟ್ಯೂಷನ್, ವಿದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು.

PUBLIC TV VIDHYAPEETA 2021 222

ಯಾರೆಲ್ಲ ಆಗಮಿಸಬಹುದು?
ಕೌನ್ಸೆಲರ್‌ಗಳು, ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪಿಯುಸಿ ವಿದ್ಯಾರ್ಥಿಗಳು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು.

ದಿನಾಂಕ : ಸೆಪ್ಟೆಂಬರ್‌ 18, 19
ಸ್ಥಳ : ಗಾಯತ್ರಿ ವಿಹಾರ್, ಅರಮನೆ ಮೈದಾನ, ಬೆಂಗಳೂರು
ಸಮಯ : ಬೆಳಗ್ಗೆ 9:30 ರಿಂದ ಸಂಜೆ 6.00 ಗಂಟೆಯವರೆಗೆ

ಶನಿವಾರ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಬ್ಲಿಕ್‌ ಟಿವಿ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ ಜೊತೆ ಮುಖ್ಯ ಅತಿಥಿಗಳಾಗಿ ರೇವಾ ವಿಶ್ವವಿದ್ಯಾಲಯದ ಕುಲಪತಿ ಶ್ಯಾಮರಾಜು, ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಕುಲಪತಿ ಡಾ.ವಿ.ಜಿ.ಜೋಸೆಫ್, ಕೇಂಬ್ರಿಡ್ಜ್ ಸಮೂಹ ಸಂಸ್ಥೆಯ ಮುಖ್ಯಸ್ಥ ಡಿ.ಕೆ.ಮೋಹನ್, ಆಚಾರ್ಯ ಸಂಸ್ಥೆಗಳ ಕಾರ್ಪೊರೇಟ್ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶಕ ವಿಶೇಷ ಚಂದ್ರಶೇಖರ್ ಭಾಗವಹಿಸಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *