ಬೆಳಗಾವಿ: ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಪ್ರಕರಣದ ವಿಚಾರವಾಗಿ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ.
Advertisement
ಸುವರ್ಣಸೌಧದ ಸ್ವಚ್ಛತಾ ಕಾರ್ಯ ಗುತ್ತಿಗೆ ಪಡೆದ ಗುತ್ತಿಗೆದಾರನಿಗೆ ನೋಟಿಸ್ ನೀಡಲಾಗಿದೆ. ಗುತ್ತಿಗೆದಾರರು ಕೊಂಡಸಕೊಪ್ಪ ಗ್ರಾಮದ ಕಾರ್ಮಿಕ ಮಹಿಳೆಯನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಅಚಾತುರ್ಯದಿಂದ ಘಟನೆ ನಡೆದಿದೆ ಎಂದು ಸಮಜಾಯಿಷಿ, ಘಟನೆ ಮರುಕಳಿಸಿದಂತೆ ಎಲ್ಲಾ ಗುತ್ತಿಗೆದಾರರಿಗೆ ಲೋಕೋಪಯೋಗಿ ಇಲಾಖೆ ನೋಟಿಸ್ ನೀಡಿದೆ. ಇದನ್ನೂ ಓದಿ: ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ
Advertisement
Advertisement
ಮಹಿಳೆಯು ದಿನಗೂಲಿ ಆಧಾರದ ಮೇಲೆ ಸುವರ್ಣಸೌಧದ ಸ್ವಚ್ಛತಾ ಕೆಲಸ ಮಾಡುತ್ತಿದ್ದರು. ಸುವರ್ಣ ಸೌಧ ಉಪವಿಭಾಗದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯ ನಿರ್ವಾಹಕ ಅಧಿಕಾರಿಯಿಂದ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿದ ಬಗ್ಗೆ ಬೆಳಗಾವಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ಗೆ ಪತ್ರ ಬರೆದು ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಮುಕ್ತಾಯ