ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ಬಂಡೆಗಳ ಮೇಲೆ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿಕೊಂಡಿದ್ದಾರೆ.
Advertisement
ಹೌದು. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ಆಡಿದ್ದೇ ಆಟ, ಹೇಳೋರಿಲ್ಲ-ಕೇಳೋರಿಲ್ಲ ಅನ್ನೋವಂತಾಗಿದೆ. ರಂತರ ಜಾರುವ ಬಂಡೆಗಳ ಮೇಲೆ ಹತ್ತಿ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಕೊರೊನಾ ಉಲ್ಬಣ- ವಿಮಾನದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
Advertisement
Advertisement
ರಸ್ತೆ ಮಧ್ಯೆ ಟ್ರಾಫಿಕ್ ಜಾಮ್ ಮಾಡ್ಕೊಂಡು ಟೂರಿಸ್ಟ್ ಗಳು ಡ್ಯಾನ್ಸ್ ಮಾಡುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದಾರೆ. ಕೆಲ ಪ್ರವಾಸಿಗರಿಗೆ ಟ್ರಾಫಿಕ್ ಜಾಮ್ ಮಾಡ್ಕೊಂಡು ರಸ್ತೆ ಮಧ್ಯೆ ಟಿಕ್‍ಟಾಕ್ ಮಾಡೋ ಶೋಕಿಯಾದ್ರೆ, ಇನ್ನೂ ಕೆಲವರು ಜಾರು ಬಂಡೆಗಳ ಮೇಲೆ ಹತ್ತಿ ಫೋಟೋಗೆ ಪೋಸ್ ಕೊಡುತ್ತಿದ್ದಾರೆ.
Advertisement
ಸ್ವಲ್ಪ ಯಾಮಾರಿ ಜಾರಿ ಬಿದ್ದರೂ ಕೈ-ಕಾಲುಗಳಿಗೆ ಗಾಯಗಳಾಗುವ ಸಾಧ್ಯತೆಗಳಿವೆ. ಈ ಹಿಂದೆ ಬಿದ್ದು ಕೈ-ಕಾಲು ಮುರ್ಕೊಂಡು, ತಲೆ ಹೊಡೆದುಕೊಂಡಿರುವ ಹಾಗೂ ಪ್ರಾಣವೂ ಹೋದ ಉದಾಹರಣೆಗಳು ಸಾಕಷ್ಟಿವೆ. ರಸ್ತೆ ಮಧ್ಯೆ ಯುವಕ-ಯುವತಿಯ ಮೋಜು-ಮಸ್ತಿಗೆ ವಾಹನ ಸವಾರರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ.