ಬೆಂಗಳೂರು : ದ್ವಿತೀಯ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಇನ್ಮುಂದೆ ಇಲಾಖೆ ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ.
ಪ್ರತಿ ವರ್ಷ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಟಾಪರ್ ಆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಅಪ್ ಲೋಡ್ ಮಾಡಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪಿಯುಸಿ ಬೋರ್ಡ್ ಮತ್ತು ಎಸ್‍ಎಸ್‍ಎಲ್‍ಸಿ ಬೋರ್ಡ್ ಗೆ ನಿರ್ದೇಶನ ನೀಡಿದ್ದಾರೆ. ಪ್ರಸಕ್ತ ವರ್ಷದಿಂದಲೇ ಈ ವ್ಯವಸ್ಥೆ ಜಾರಿಗೆ ಬರಲಿದ್ದು, ಕಳೆದ ವರ್ಷ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಶೀಘ್ರವೇ ಇಲಾಖೆ ವೆಬ್‍ಸೈಟ್ ನಲ್ಲಿ ಲಭ್ಯವಾಗಲಿದೆ.
Advertisement
ಶಿಕ್ಷಣ ಇಲಾಖೆಯಿಂದ ನಡೆಸುವ "ಸಂವೇದನಾ" ಫೋನ್-ಇನ್ ಕಾರ್ಯಕ್ರಮದಲ್ಲಿ ಬಂದ ಮನವಿಗಳ ಆಧಾರದ ಮೇಲೆ
ಕಳೆದ ವರ್ಷದ ಪಿಯುಸಿ ಮತ್ತು ಎಸ್ಎಸ್ಎಲ್ ಸಿ ಪರೀಕ್ಷೆಗಳಲ್ಲಿ
ಅತಿ ಹೆಚ್ಚು ಅಂಕಪಡೆದಿರುವ ವಿದ್ಯಾರ್ಥಿಗಳ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳನ್ನು ವೆಬ್ ಸೈಟ್ ಮೂಲಕ ಪ್ರಕಟಿಸಲು ನಿರ್ಧರಿಸಲಾಗಿದೆ.
— S.Suresh Kumar (@nimmasuresh) December 26, 2019
Advertisement
ಸಚಿವ ಸುರೇಶ್ ಕುಮಾರ್ ಅವರ ಸಂವೇದನಾ ಫೋನ್ ಇನ್ ಕಾರ್ಯಕ್ರಮದಲ್ಲಿ ಟಾಪರ್ಸ್ ಉತ್ತರ ಪತ್ರಿಕೆ ಪ್ರಕಟಿಸುವಂತೆ ಪೋಷಕರು ಮತ್ತು ವಿದ್ಯಾರ್ಥಿಗಳು ಮನವಿ ಮಾಡಿದ್ರು. ಮನವಿಗೆ ಸ್ಪಂದಿಸಿರೋ ಸಚಿವರು ಉತ್ತರ ಪತ್ರಿಕೆ ಅಪ್ಲೋಡ್ ಮಾಡುವಂತೆ ಪಿಯುಸಿ ಬೋರ್ಡ್ ಮತ್ತು ಎಸ್‍ಎಸ್‍ಎಲ್‍ಸಿ ಬೋರ್ಡ್ ಗೆ ಸೂಚನೆ ನೀಡಿದ್ದಾರೆ.
Advertisement
ಅತಿ ಹೆಚ್ಚು ಅಂಕ ಪಡೆದವರ ಬರವಣಿಗೆ ಕೌಶಲ್ಯ ಹೇಗಿರುತ್ತೆ? ಪ್ರಶ್ನೆಗೆ ಉತ್ತರಿಸಿರುವ ವಿಧಾನ ಹೇಗಿದೆ? ಹೀಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯ ಉತ್ತರ ಪತ್ರಿಕೆಯ ವಿಶೇಷತೆ ಬಗ್ಗೆ ತಿಳಿದುಕೊಳ್ಳಲು ಈ ವಿಧಾನ ಅನುಕೂಲವಾಗಲಿದೆ. ಟಾಪರ್ಸ್ ಉತ್ತರ ಪತ್ರಿಕೆ ನೋಡಿ ವಿದ್ಯಾರ್ಥಿಗಳು ಅದರಿಂದ ಪ್ರಭಾವಿತರಾಗಿ ಅತಿ ಹೆಚ್ಚು ಅಂಕ ಪಡೆಯಲು ಸಹಾಯವಾಗುತ್ತದೆ.