ಪಿಯುಸಿ ಫೇಲ್ ಆದ ಪ್ರಿಯಾಂಕ್ ಖರ್ಗೆ ಎಂಜಿನಿಯರ್ ಸೂಲಿಬೆಲೆ ಪದವಿ ಕೇಳ್ತಾರೆ: ಭರತ್ ಶೆಟ್ಟಿ ವ್ಯಂಗ್ಯ

Public TV
1 Min Read
Bharath Shetty

ಮಂಗಳೂರು: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದರೂ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ (Chakravarti Sulibele) ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು (Mangaluru) ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ (Bharath Shetty) ವ್ಯಂಗ್ಯವಾಡಿದ್ದಾರೆ.

PRIYANK KHARGE

ಸೂಲಿಬೆಲೆ ಯಾವ ಪಿಹೆಚ್‌ಡಿ ಪದವಿ ಗಳಿಸಿದ್ದಾನೆ? ಬಾಡಿಗೆ ಭಾಷಣಕಾರರನ್ನು ಲೇಖಕರು ಮಾಡಿ, ಅವನ ಪಾಠ ಮಕ್ಕಳು ಏಕೆ ಓದಬೇಕು ಎಂದು ಏಕವಚನದಲ್ಲಿ ಮಾತನಾಡಿರುವ ಪ್ರಿಯಾಂಕ್ ಖರ್ಗೆ ಬಗ್ಗೆ ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲು ನಿಮ್ಮ ವಿದ್ಯಾರ್ಹತೆ ನೋಡಿಕೊಂಡು ಸೂಲಿಬೆಲೆ ಬಗ್ಗೆ ಮಾತನಾಡಿ. ನಿಮಗೆ ಪ್ರಶ್ನಿಸುವ ನೈತಿಕ ಹಕ್ಕು ಇಲ್ಲ ಎಂದು ಖರ್ಗೆಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಹೊಸ ಬಾಂಬ್

bharath shetty 2

ದೇಶದಲ್ಲಿ ರಾಷ್ಟ್ರೀಯತೆಯನ್ನು, ದೇಶ ಪ್ರೇಮವನ್ನು ಜಾಗೃತಿ ಮಾಡುವುದೇ ಅಪರಾಧವೆಂದು ಪ್ರಿಯಾಂಕ್ ಖರ್ಗೆ ತಿಳಿದಂತಿದೆ. ದೇಶ ಭಕ್ತಿ, ನಮ್ಮ ರಾಷ್ಟ್ರ ಎಂಬ ಭಾವನೆಯನ್ನು ನಮ್ಮ ಭವಿಷ್ಯದ ಮಕ್ಕಳಿಗೆ ಯಾವತ್ತೂ ತಿಳಿಸುವ ಗೋಜಿಗೆ ಹೋಗದ ಕಾಂಗ್ರೆಸ್ ಪಕ್ಷ ದೇಶದೊಳಗೆ ಭಯೋತ್ಪಾದಕನಿಗೆ ಏನಾದಾರೂ ಆದರೆ ಕಣ್ಣೀರಿಡುವ ಪಕ್ಷವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಷ್ಟ್ರೀಯತೆಯ ಭಾವನೆಯಿಲ್ಲದೆ ಸೊರಗಿರುವ ಮಕ್ಕಳು ಇಂದು ರೈಲು ಓಡಾಡುವ ಹಳಿಗಳ ಮೇಲೆ ಕಲ್ಲಿಟ್ಟು, ಕಲ್ಲು ತೂರಾಟ ನಡೆಸಿ ಹಿಂಸಾ ಪ್ರವೃತ್ತಿ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಪಟ ಜಾತ್ಯತೀತತೆಯ ಕಾರಣದಿಂದಾಗಿ ದೇಶ ಸೊರಗುತ್ತಿದೆಯೇ ಹೊರತು, ಸೂಲಿಬೆಲೆಯಂತಹ ದೇಶ ಭಕ್ತರಿಂದಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸುವರ್ಣಾವಕಾಶ ಕಳೆದುಕೊಳ್ಳಲು ಬಯಸದ ಡಿಕೆಶಿ!

Share This Article