ಬೆಂಗಳೂರು: ಲೋಕಸಭೆ ಚುನಾವಣೆಯಿಂದ ರಾಜಕಾರಣಿಗಳಿಗೆ ಪರೀಕ್ಷೆ ಒಂದು ಕಡೆ ಆದ್ರೆ, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.
ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಬೆಳಗ್ಗೆ 11 ಗಂಟೆಗೆ ಪಿಯುಸಿ ಬೋರ್ಡ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಚುನಾವಣೆ ನೀತಿ ಸಂಹಿತೆ ಇರುವ ಕಾರಣ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ಪ್ರಭಾರ ನಿರ್ದೇಶಕಿ ಶಿಖಾ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಈ ಬಾರಿ ಸುಮಾರು 6.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 12 ಗಂಟೆ ನಂತರ ಪಿಯುಸಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಫಲಿತಾಂಶ ಲಭ್ಯವಾಗುವ ವೆಬ್ ಸೈಟ್
http://pue.kar.nic.in
www.karresults.nic.in