Recent News

ಜಲಾಶಯಕ್ಕೆ ಹಾರಿ ಪಿಯು ವಿದ್ಯಾರ್ಥಿ ಆತ್ಮಹತ್ಯೆ

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಜಲಾಶಯ ಕಣ್ವ ಜಲಾಶಯಕ್ಕೆ ಅಪ್ರಾಪ್ತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತನನ್ನು 17 ವರ್ಷದ ಗಗನ್ ಎಂದು ಗುರುತಿಸಲಾಗಿದ್ದು, ಈತ ರಾಮನಗರ ತಾಲೂಕಿನ ಆನಮಾನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ಗಗನ್ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ಓದುತ್ತಿದ್ದನು.

ಬುಧವಾರ ರಾತ್ರಿ ಗಗನ್ ಜಲಾಶಯಕ್ಕೆ ಹಾರಿದ್ದಾನೆ. ಇಂದು ಬೆಳಗ್ಗೆ ಜಲಾಶಯದ ಬಳಿ ಗಗನ್ ಬೈಕ್ ಹಾಗೂ ಚಪ್ಪಲಿ ನೋಡಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಸದ್ಯ ಗಗನ್ ಮೃತದೇಹದ ಮರಣೋತ್ತರ ಪರೀಕ್ಷೆಗೆಂದು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಯಾವ ಕಾರಣಕ್ಕೆ ಗಗನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿಲ್ಲ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *