ಹಾಸನ: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ (Student) ನೀರುಪಾಲಾದ ಘಟನೆ ಹಾಸನ (Hassan) ಹೊರವಲಯದ ಉದ್ದೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಈತ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ಇಂದು (ಫೆ.7) ಮಧ್ಯಾಹ್ನ ನಾಲ್ವರು ಸ್ನೇಹಿತರ ಜೊತೆ ಉದ್ದೂರು ಕೆರೆಗೆ ಈಜಲು ತೆರಳಿದ್ದ. ಐವರಲ್ಲಿ ಇಬ್ಬರು ಸ್ನೇಹಿತರು ಈಜಲು ನೀರಿಗೆ ಇಳಿದಿದ್ದರು. ಕೆರೆಯ ಆಳವಾದ ಪ್ರದೇಶಕ್ಕೆ ಈಜುತ್ತಾ ಹೋಗಿದ್ದ ಪ್ರಜ್ವಲ್ ವಾಪಾಸ್ ಬರಲು ಆಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಭೀಕರ ಅಪಘಾತ – ಬಿಎಂಟಿಸಿ ಬಸ್‌ಗೆ ಮಣಿಪುರದ ಯುವತಿ ಬಲಿ
ಅಗ್ನಿಶಾಮಕದಳದ ಸಿಬ್ಬಂದಿ ಕೆರೆಯಿಂದ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೆನ್ಷನ್‌ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಹೋಂವರ್ಕ್ ಮಾಡದ ಮಗುವಿಗೆ ನೂರವೈತ್ತು ಬಾರಿ ಥಳಿಸಿದ ಶಿಕ್ಷಕ

