ಬಣ್ಣದ ಲೋಕದಲ್ಲಿ ದಿನ ಕಳೆದಂತೆ ಹೊಸ ಹೊಸ ನಾಯಕಿಯರ ಪರಿಚಯವಾಗ್ತಿದೆ. ಆದ್ರೆ ಪ್ರತಿಭೆಯ ಜೊತೆಗೆ ಅದೃಷ್ಟ ಇದ್ದವರು ಮಾತ್ರ ಇಲ್ಲಿ ಗಟ್ಟಿಯಾಗಿ ನೆಲೆಯೂರ್ತಾರೆ. ಈ ಸಾಲಿನಲ್ಲಿ ಪ್ರತಿಭಾನ್ವಿತ ನಟಿ ಚೈತ್ರಾ ಆಚಾರ್ ಕೂಡ ಒಬ್ಬರು.
ಈಗಾಗಲೇ ಮಹಿರಾ, ಗಿಲ್ಕಿ, ತಲೆದಂಡ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ವಿಶೇಷ ಪಾತ್ರಗಳ ಮೂಲಕ ಮೋಡಿ ಮಾಡಿರೋ ನಟಿ ಚೈತ್ರಾ ಈಗ `ಅಕಟಕಟ’ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ..
ಈ ಹಿಂದೆ `ಪುಕ್ಸಟ್ಟೆ ಲೈಫು’ ಚಿತ್ರ ನಿರ್ಮಾಣ ಮಾಡಿದ್ದ ನಾಗರಾಜ್ ಸೋಮಯಾಜಿ ಇದೀಗ `ಅಕಟಕಟ’ ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದಾರೆ. `ಅಕಟಕಟ’ ಸಿನಿಮಾದಲ್ಲಿ ಜಾನಕಿ ಎಂಬ ಚೈತ್ರಾ ಆಚಾರ್ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಚಿತ್ರದ ನಾಯಕಿಯ ಲುಕ್‌ನ್ನ ಚಿತ್ರತಂಡ ಇದೀಗ ರಿವೀಲ್ ಮಾಡಿದೆ. ಸದಾ ಖುಷಿ ಖುಷಿಯಿಂದ ಜೀವನವನ್ನು ಜೀವಿಸುವ,ನೆಗೆಟಿವ್ ಬಿಟ್ಟು ಪಾಸಿಟಿವ್ ಬಗ್ಗೆ ಯೋಚಿಸುವ ಮಧ್ಯಮ ವರ್ಗದ ಹುಡುಗಿಯ ಪಾತ್ರದಲ್ಲಿ ಚೈತ್ರಾ ಕಾಣಿಸಿಕೊಳ್ತಿದ್ದಾರೆ. ಇಂಥ ನಾಯಕಿಯ ಬದುಕಿಗೆ ನಾಯಕ ಎಂಟ್ರಿ ಕೊಟ್ಟಾಗ ಏನಾಗುತ್ತೇ ಅನ್ನೋದೇ ಚಿತ್ರದ ಸ್ಟೋರಿ. ಇದನ್ನು ಓದಿ: ಪುಷ್ಪ-2ನಲ್ಲೂ ಸಮಂತಾ- ಆದ್ರೆ ಐಟಂ ಸಾಂಗ್‌ನಲ್ಲಿ ಅಲ್ಲ?
ನಿರ್ದೇಶಕ ನಾಗರಾಜ್ ಸೋಮಯಾಜಿ ಮೂಲತಃ ಫೋಟೋಗ್ರಾಫರ್,ರಂಗಭೂಮಿಯಲ್ಲಿಯೂ ಸಕ್ರಿಯರಾಗಿರುವ ಅವರು ಕಿರುಚಿತ್ರವೊಂದನ್ನು ನಿರ್ದೇಶನ ಮಾಡಿದ್ದರು. ಈಗ `ಅಕಟಕಟ’ ಸಿನಿಮಾಗೆ ಚಿತ್ರಕಥೆ ಬರೆದು ಡೈರೆಕ್ಷನ್ ಕೂಡ ನಿರ್ದೇಶಕ ನಾಗರಾಜ್ ಅವರೇ ಮಾಡ್ತಿದ್ದಾರೆ. ಸದ್ಯ ಭಿನ್ನ ಟೈಟಲ್‌ನಿಂದ ಗಮನ ಸೆಳೆಯುತ್ತಿರೋ `ಅಕಟಕಟ’ ಚಿತ್ರ, ಮುಂದಿನ ದಿನಗಳಲ್ಲಿ ಅದ್ಯಾವ ರೀತಿ ಸೌಂಡ್ ಮಾಡಬಹುದು ಅಂತಾ ಕಾದು ನೋಡಬೇಕಿದೆ.