– ಜ.19 ರಂದು ಪಲ್ಸ್ ಪೋಲಿಯೋ
ಬೆಂಗಳೂರು: ಪೊಲಿಯೋ ನಿರ್ಮೂಲನೆ ಮಾಡುವ ಲಸಿಕಾ ಕಾರ್ಯಕ್ರಮ ಪಲ್ಸ್ ಪೋಲಿಯೋ ಜನವರಿ 19 ರಂದು ರಾಜ್ಯಾದ್ಯಂತ ನಡೆಯಲಿದೆ. ಈ ಬಾರಿಯ ಪೋಲಿಯೋ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಮುಷ್ಕರ ತೊಂದರೆಯಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಈ ಹಿಂದಿನ ಪಲ್ಸ್ ಪೋಲಿಯೋ ಕಾರ್ಯಕ್ರಮಗಳನ್ನು ಆಶಾ ಕಾರ್ಯಕರ್ತೆಯರೇ ನಿರ್ವಹಿಸುತ್ತಾ ಇದ್ದರು. ಆದರೆ ಆಶಾ ಕಾರ್ತಕರ್ತೆಯರ ಮುಷ್ಕರದಿಂದ ಸಮಸ್ಯೆ ಆಗುತ್ತಾ ಎಂದು ಊಹಿಸಲಾಗಿತ್ತು. ಆದರೆ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟ ಪಡಿಸಿದೆ.
Advertisement
Advertisement
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಳೆದ ಒಂದು ತಿಂಗಳಿನಿಂದ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಶೇ.70 ರಷ್ಟು ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿರುವುದು ಸ್ಪಷ್ಟವಾಗಿದೆ. ಹಾಗಾಗಿ ಈ ಕಾರ್ಯಕ್ರಮಕ್ಕೆ ಸಿಬ್ಬಂದಿ ಕೊರತೆ ಇದ್ದರೆ ಆಶಾ ಕಾರ್ಯಕರ್ತೆ ಯಾರಿಗೂ ಮುಂಚೆ ಸಾಮಾಜಿಕ ಸಂಘಟನಾ ಕಾರ್ಯ ತಂತ್ರದಂತೆ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಆರೋಗ್ಯ ಇಲಾಖೆಯ ಇತರ ಸಿಬ್ಬಂದಿ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು, ಸ್ವಯಂಸೇವಕರು, ಶುಶ್ರೂಷಕರು, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಬಳಸಿಕೊಳ್ಳಲು ನಿರ್ಧಾರ ಮಾಡಿದೆ.
Advertisement
ಈ ಕಾರ್ಯಕ್ರಮಕ್ಕೆ ಗ್ರಾಮ ಸಂಪನ್ಮೂಲ ವ್ಯಕ್ತಿಗಳು, ಸಾಮಾಜಿಕ ಕಳಕಳಿಯುಳ್ಳ ನಾಗರೀಕರನ್ನು ಬಳಸಿಕೊಳ್ಳಲು ಕೂಡ ಸೂಚನೆ ನೀಡಲಾಗಿದೆ. ಈ ಬಾರಿಯ ಲಸಿಕಾ ಕಾರ್ಯಕ್ರಮಕ್ಕೆ ಆಶಾ ಕಾರ್ಯಕರ್ತೆಯರ ಮುಷ್ಕರ ಯಾವುದೇ ರೀತಿಯ ಅಡ್ಡಿಯಾಗುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.