ಚಂಡಿಗಢ: ಕಳೆದ ವರ್ಷವಷ್ಟೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾರತೀಯ ದೇಶಾಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಪುಲ್ವಾಮದಲ್ಲಿ ನಡೆದ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಪಂಜಾಬ್ ರಾಜ್ಯ ಸರ್ಕಾರ ಘಟನೆಗೆ ಕಾರಣವಾಗಿರುವ ಉಗ್ರ ಸಂಘಟನೆ ಹಾಗೂ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವಂತೆ ಆಗ್ರಹಿಸಿದ್ದರೂ ಕೂಡ ನವಜೋತ್ ಸಿಂಗ್ ಮಾತ್ರ ಭಿನ್ನ ರಾಗ ಪ್ರಕಟಿಸಿದ್ದಾರೆ.
Advertisement
Navjot Singh Sidhu: It is condemnable, it's a cowardly act. It needs a permanent solution through dialogue, how long will the Jawans sacrifice their lives? How long will the bloodshed continue? People who do this must be punished. Hurling abuses won't help. #PulwamaAttack pic.twitter.com/R927il2bx1
— ANI (@ANI) February 15, 2019
Advertisement
ಈ ಕುರಿತು ಖಾಸಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ನವಜೋತ್ ಸಿಂಗ್, ದಾಳಿಯಲ್ಲಿ ನಡೆಸಿದವರಿಗೆ ಕಠಿಣ ಶಿಕ್ಷೆ ಆಗಬೇಕೆಂದು ಹೇಳಿದ್ದಾರೆ. ಆದರೆ ಯಾರೋ ಮಾಡಿದ ಕೃತ್ಯಕ್ಕೆ ಯಾವುದೇ ದೇಶದ ಮೇಲೆ ಆರೋಪ ಮಾಡುವುದು ಸರಿಯಲ್ಲ. ಇವುಗಳಿಗೆಲ್ಲ ಶಾಂತಿ ಮಾತುಕತೆ ಒಂದೇ ಪರಿಹಾರ ಎಂದು ಹೇಳುವ ಮೂಲಕ ಕೃತ್ಯದಲ್ಲಿ ಪಾಕಿಸ್ತಾನದ ಪಾತ್ರದ ಕುರಿತು ಪರೋಕ್ಷವಾಗಿ ಕ್ಲೀನ್‍ಚಿಟ್ ನೀಡಿದ್ದಾರೆ.
Advertisement
ದಾಳಿಯ ಬಳಿಕವೂ ಶಾಂತಿ ಮಂತ್ರವೇ ಇದಕ್ಕೆ ಪರಿಹಾರ ಎಂದು ಪುನರ್ ಉಚ್ಚರಿಸಿದ ಸಿದ್ದು, ಯಾರು ಕೂಡ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿಲ್ಲ. ಇದುವೇ ಇಂತಹ ಘಟನೆಗಳು ಮರುಕಳಿಸಲು ಕಾರಣವಾಗುತ್ತಿದೆ. 71 ವರ್ಷಗಳಿಂದಲೂ ಇದೇ ನಡೆಯುತ್ತಿದೆ. ಭಯೋತ್ಪಾಧನೆಯಿಂದ ಏನು ಸಾಧಿಸಲು ಆಗುವುದಿಲ್ಲ. ಇದಕ್ಕೆ ಶಾಂತಿ ಮಾತುಕತೆಯೇ ಪರಿಹಾರ ಎಂದು ಹೇಳುವ ಮೂಲಕ ಪಾಕ್ ಜೊತೆಗಿನ ಮಾತುಕತೆಯನ್ನು ಸಮರ್ಥಿಸಿಕೊಂಡಿದ್ದಾರೆ.
Advertisement
ಇದೇ ವೇಳೆ ದಾಳಿಯ ಬಗ್ಗೆಯೂ ಖಂಡನೆ ಮಾಡಿರುವ ಸಿಧು, ಹೇಡಿಗಳ ಕೃತ್ಯ ಇದಾಗಿದೆ. ಇನ್ನು ಎಷ್ಟು ವರ್ಷ ಯೋಧರು ತಮ್ಮ ಪ್ರಾಣವನ್ನು ಆರ್ಪಿಸಬೇಕು. ಇಂತಹ ವಿಚಾರಗಳನ್ನು ವ್ಯಕ್ತಿಗತವಾಗಿ ತೆಗೆದುಕೊಳ್ಳುವುದರಿಂದ ಕೇವಲ ನಿಂದನೆ ಮಾಡಲು ಮಾತ್ರ ಎಂದಿದ್ದಾರೆ. ಸಿಧು ಅವರಿಂದ ಈ ಹೇಳಿಕೆ ಪ್ರಕಟವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಸಿಧು ಹೇಳಿಕೆಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಮಾಡಿ ತಿಳಿಸಿ..
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv