ವಾಷಿಂಗ್ಟನ್: ಕಾಶ್ಮೀರದ ಪುಲ್ವಾಮಾದಲ್ಲಿ ಭಾರತದ ಯೋಧರ ಮೇಲೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ದಾಳಿ ಭಾರೀ ಭಯಾನಕವಾಗಿದೆ. ಈ ಸಂಬಂಧ ನಾವು ವರದಿಯನ್ನು ಪಡೆದಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಶ್ವೇತ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪುಲ್ವಾಮಾ ಆತ್ಮಾಹುತಿ ದಾಳಿಯಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಭಯ ದೇಶಗಳು ಸ್ನೇಹಪರತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Advertisement
Advertisement
ಪುಲ್ವಾಮಾ ದಾಳಿಯನ್ನು ವೀಕ್ಷಿಸಿದ್ದೇನೆ. ಈ ಸಂಬಂಧ ಸಾಕಷ್ಟು ವರದಿಗಳನ್ನು ಪಡೆದಿದ್ದೇನೆ. ಘಟನೆಯ ಕುರಿತು ಸೂಕ್ತ ಸಮಯದಲ್ಲಿ ನಾವು ಪ್ರತಿಕ್ರಿಯೆ ನೀಡುತ್ತೇವೆ. ಪಾಕಿಸ್ತಾನ ಹಾಗೂ ಭಾರತ ಒಟ್ಟಾಗಿ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.
Advertisement
ಪ್ರತ್ಯೇಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಮೆರಿಕ ವಿದೇಶಾಂಗ ವ್ಯವಹಾರಗಳ ಇಲಾಖೆ ಉಪ ವಕ್ತಾರ ರಾಬರ್ಟ್ ಪಲ್ಲಾಡಿನೋ ಅವರು, ಪುಲ್ವಾಮಾ ದಾಳಿಯ ಬಗ್ಗೆ ನಾನು ಕೇವಲ ಸಂತಾಪವನ್ನು ಸೂಚಿಸಲ್ಲ. ಅದರ ಜೊತೆಗೆ ಭಾರತಕ್ಕೆ ಬಲವಾದ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.
Advertisement
ದಾಳಿಯ ತನಿಖೆ ನಡೆಸಲು ಸಂಪೂರ್ಣ ಸಹಕಾರ ನೀಡುವಂತೆ ಹಾಗೂ ಘಟನೆಗೆ ಕಾರಣವಾದ ಉಗ್ರರನ್ನು ಶಿಕ್ಷಿಸಲು ಪಾಕಿಸ್ತಾನಕ್ಕೆ ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ.
ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೊಲ್ಟನ್ ಅವರು, ಭಾರತದ ಸ್ವರಕ್ಷಣೆ ಹೋರಾಟಕ್ಕೆ ಬೆಂಬಲ ನೀಡುವುದುದಾಗಿ ಈ ಹಿಂದೆಯೇ ಹೇಳಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv