Connect with us

Latest

ಪುಲ್ವಾಮಾದಲ್ಲಿ ಮತ್ತೆ ಗುಂಡಿನ ಚಕಮಕಿ- ಇಬ್ಬರು ಯೋಧರಿಗೆ ಗಾಯ

Published

on

ಶ್ರೀನಗರ: ಪುಲ್ವಾಮಾದಲ್ಲಿ ಮತ್ತೆ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ಏರ್ಪಟ್ಟಿದ್ದು, ಕಾರ್ಯಾಚಾರಣೆ ಇನ್ನೂ ಪ್ರಗತಿಯಲ್ಲಿದೆ. ಈ ವೇಳೆ ಇಬ್ಬರು ಯೋಧರಿಗೆ ತೀವ್ರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಾಕಪುರ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ವೇಳೆ ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೆ ಈ ಪ್ರದೇಶದಲ್ಲಿ ಮೂವರು ಉಗ್ರರು ಸಿಲುಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement
Continue Reading Below

ಕಾಕಪುರ ಪ್ರದೇಶದ ಮರ್ವಾಲ್ ಗ್ರಾಮದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಸೇನೆಯ ಸಿಆರ್ ಪಿಎಫ್, 50 ಆರ್‍ಆರ್ ಹಾಗೂ ಪೊಲೀಸರು ಜಂಟಿಯಾಗಿ ಪ್ರದೇಶವನ್ನು ಸುತ್ತುವರಿದು ಹುಡುಕುವ ಕಾರ್ಯಾಚರಣೆಯನ್ನು ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಂಟಿ ತಂಡಗಳು ಪ್ರದೇಶವನ್ನು ಸುತ್ತುವರಿಯುತ್ತಿದ್ದಂತೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಆರಂಭಿಸಿದರು. ಈ ಮೂಲಕ ಎನ್‍ಕೌಂಟರ್‍ ಗೆ  ಪ್ರಚೋದನೆ ನೀಡಿದರು. ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ. ಈ ವೇಳೆ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ನಡೆದಿರುವ ಕುರಿತು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮೂಲಗಳ ಪ್ರಕಾರ ಇಬ್ಬರು, ಮೂವರು ಉಗ್ರರು ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Click to comment

Leave a Reply

Your email address will not be published. Required fields are marked *