ನವದೆಹಲಿ: ಪುಲ್ವಾಮಾ ಭಯೋತ್ಪಾದನೆ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಮಾರುತಿ ಇಕೋ ಕಾರಿನ ಮಾಲೀಕನನ್ನು ಪತ್ತೆ ಹಚ್ಚಿದೆ. ತನಿಖೆಯ ವೇಳೆ ಕಾರು 10 ದಿನ ಹಿಂದೆಯಷ್ಟೇ ಉಗ್ರರ ಕೈ ಸೇರಿದ ವಿಚಾರ ಬೆಳಕಿಗೆ ಬಂದಿದೆ.
ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಮತ್ತು ಅಟೋಮೊಬೈಲ್ ತಜ್ಞರ ಸಹಾಯದಿಂದ ಚಾಸಿ ನಂಬರ್ ಮತ್ತು ಎಂಜಿನ್ ನಂಬರ್ ಅನ್ನು ಎನ್‍ಐಎ ಕಲೆ ಹಾಕಿ ಕಾರಿನ ಮೂಲ ಮಾಲೀಕರು ಯಾರು ಎನ್ನುವುದನ್ನು ಪತ್ತೆ ಹಚ್ಚಿದೆ.
Advertisement
Advertisement
ಕಾರು ಎಲ್ಲಿಂದ ಮಾರಾಟವಾಗಿ ಇದರ ಮೊದಲ ಮಾಲೀಕರ ಮಾಹಿತಿಯನ್ನು ಕಲೆ ಹಾಕಿದಾಗ 2011 ರಲ್ಲಿ ಅನಂತ್‍ನಾಗ್‍ನಿಂದ ಜಲೀಲ್ ಅಹ್ಮದ್ ಹಕ್ಕಾನಿ ಅವರು ಈ ಕಾರನ್ನು ಮೊದಲು ಖರೀದಿಸಿದ್ದಾರೆ. ಇವರು ಖರೀದಿಸಿದ ಬಳಿಕ ಕಾರು 7 ಜನರಿಗೆ ಮಾರಾಟವಾಗಿ ಕೊನೆಯ ಬಾರಿ ಈ ವರ್ಷದ ಫೆ.4 ರಂದು ಅನಂತ್‍ನಾಗ್ ಜಿಲ್ಲೆಯ ಮುಕ್ಬುಲ್ ಬಟ್ ಮಗ ಸಜ್ಜದ್ ಬಟ್ ಖರೀದಿಸಿದ್ದ.
Advertisement
ಈ ಮಾಹಿತಿ ಸಿಕ್ಕಿದ ಕೂಡಲೇ ಎನ್‍ಐಎ ತಂಡ ಜಮ್ಮು ಕಾಶ್ಮೀರ ಪೊಲೀಸರ ಸಹಾಯದಿಂದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹ್ರಾಕ್ಕೆ ತೆರಳಿ ಸಜ್ಜದ್ ಬಟ್‍ಗಾಗಿ ಶೋಧಿಸಿದೆ. ಈ ವೇಳೆ ಆತ ನಾಪತ್ತೆಯಾಗಿದ್ದ. ಶೋಪಿಯನ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿರುವ ಈತ ಸದ್ಯಕ್ಕೆ ಜೈಷ್-ಇ-ಮೊಹಮ್ಮದ್ ಸಂಘಟನೆಯ ಸೇರಿದ್ದಾನೆ. ಸಜ್ಜದ್ ಕೈಯಲ್ಲಿ ಬಂದೂಕು ಹಿಡಿದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Advertisement
ಫೆ.24 ರಂದು ಉಗ್ರ ಆದಿಲ್ ದಾರ್ ಸ್ಫೋಟಕ ತುಂಬಿದ ಮಾರುತಿ ಇಕೋ ಕಾರನ್ನು ಸಿಆರ್‌ಪಿಎಫ್ ಯೋಧರಿದ್ದ ಬಸ್ಸಿಗೆ ಗುದ್ದಿದ ಪರಿಣಾಮ 44 ಮಂದಿ ಯೋಧರು ಹುತಾತ್ಮರಾಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv