ಬೆಂಗಳೂರು/ರಾಯಚೂರು: ಪುಲ್ವಾಮಾ ಉಗ್ರರ ದಾಳಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಬೆಂಬಲ ನೀಡಿದ್ದ ಕಾಶ್ಮೀರಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಥಾಹೀರ್ ಲತೀಫ್ ಬಂಧಿತ ಆರೋಪಿಯಾಗಿದ್ದು, ನಗರದ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ವ್ಯಾಸಂಗ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಈತ ಕಾಶ್ಮೀರ ಮೂಲದ ಯುವಕನಾಗಿದ್ದು, ಕೆಲ ಸಮಯದ ಹಿಂದೆ ನಗರಕ್ಕೆ ಶಿಕ್ಷಣಕ್ಕಾಗಿ ಆಗಮಿಸಿದ್ದ.
Advertisement
Advertisement
ಪುಲ್ವಾಮಾ ದಾಳಿ ಮಾಡಿದವರಿಗೆ ಬಿಗ್ ಸೆಲ್ಯೂಟ್ ಎಂದು ಪೋಸ್ಟ್ ಮಾಡಿದ್ದ ಆರೋಪಿ, ನಿನಗೆ ಸ್ವರ್ಗ ಪ್ರಾಪ್ತಿ ಆಗುತ್ತದೆ ಎಂದು ಬರೆದುಕೊಂಡಿದ್ದ. ಈ ಸಂಬಂಧ ನಗರದ ಬಾಗಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿವನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
Advertisement
ಇತ್ತ ರಾಯಚೂರಿನ ಮಸ್ಕಿಯ ತಲೇಖಾನ ಗ್ರಾಮದಲ್ಲಿ ಪಾಕ್ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂರೆ 6 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಸಂಬಂಧ ಗ್ರಾಮದ ಬಾಷಾಸಾಬ್, ಹುಸೇನಸಾಬ್, ರಹಿಮಾನಸಾಬ್, ಬುಡ್ನೆಸಾಬ್ ಸೇರಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಗ್ರಾಮದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಆರೋಪಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಪರಿಣಾಮ ಗ್ರಾಮಸ್ಥರು ಪ್ರತಿಘಟನೆ ನಡೆಸಿ ದೂರು ದಾಖಲಿಸಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv