ಭೋಪಾಲ್: ಇಂಧೋರ್‌ನಿಂದ ಮಹಾರಾಷ್ಟ್ರದ ಪುಣೆಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಖಾಲ್‌ಘಾಟ್ ಸೇತುವೆ ತಡೆಗೋಡೆ ಮುರಿದು ಸುಮಾರು 100 ಅಡಿ ಎತ್ತರದಿಂದ ನರ್ಮದಾ ನದಿಗೆ ಉರುಳಿ ಬಿದ್ದಿದೆ.
#MadhyaPradesh | A bus fell in the Narmada river in Dhar, 12 people died.
Madhya Pradesh CM @ChouhanShivraj has taken cognizance of the bus accident. pic.twitter.com/UHtXKRVabd
— DD News (@DDNewslive) July 18, 2022
Advertisement
ಇದರಿಂದ 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಧಮ್ನೋಡ್ ಪೊಲೀಸ್ ಠಾಣೆಯ ಉಸ್ತುವಾರಿ ರಾಜ್‌ಕುಮಾರ್ ಯಾದವ್ ತಿಳಿಸಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ
Advertisement
Advertisement
ನರ್ಮದಾ ನದಿಯಲ್ಲಿ ಸಂಪೂರ್ಣವಾಗಿ ಮುಳುಗಿರುವ ಬಸ್‌ನಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ನಮಗಿನ್ನೂ ಸ್ಪಷ್ಟ ಮಾಹಿತಿ ದೊರೆತಿಲ್ಲ. ಈಗಾಗಲೇ 12 ಮಂದಿ ಮೃತಪಟ್ಟಿದ್ದು, ಉಳಿದವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಬದುಕುಳಿಯುವ ಸಾಧ್ಯತೆಗಳೂ ಇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬ್ರೇಕಪ್ ನಂತರ ಸ್ಟಾರ್ ನಟಿ ಸಹೋದರನ ಜೊತೆ ಇಲಿಯಾನಾ ಡೇಟಿಂಗ್
Advertisement
ಇಂಧೋರ್‌ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಬಸ್ ತಡೆಗೋಡೆ ಮುರಿದು ನದಿಗೆ ಬಿದ್ದಿದೆ. ಬಸ್ ಅನ್ನು ನದಿಯಿಂದ ಮೇಲೆತ್ತಲು ಭಾರೀ ಯಂತ್ರೋಪಕರಣಗಳನ್ನು ನಿಯೋಜಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡವು (SDRF) ಸ್ಥಳದಲ್ಲಿದ್ದು, ಸ್ಥಳೀಯ ಮೀನುಗಾರರೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಇಂಧೋರ್ ಮತ್ತು ಧಾರ್‌ನ ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯ ಪರಿಶೀಲಿಸಲು ಸ್ಥಳಕ್ಕೆ ಧಾವಿಸಿದ್ದಾರೆ.