ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿರುವ ಮೊದಲ ಓಮಿಕ್ರಾನ್ ಸೋಂಕಿತ

Public TV
1 Min Read
CORONA 3

ಮುಂಬೈ: ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಸೋಂಕಿಗೆ ಒಳಗಾಗಿದ್ದ ಪುಣೆಯ ವ್ಯಕ್ತಿಗೆ ನೆಗಟಿವ್ ವರದಿ ಬಂದಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಾರೆ.

CORONA

ಗುರುವಾರ ಸವೆನ್ ಹಿಲ್ ಆಸ್ಪತ್ರೆಯಲ್ಲಿ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ರೋಗಿಗೆ ನೆಗೆಟಿವ್ ವರದಿ ಬಂದಿದ್ದು, ಓಮಿಕ್ರಾನ್‍ನಿಂದ ಗುಣಮುಖರಾಗಿ ಶೀಘ್ರ ಮನೆಗೆ ಹಿಂದಿರುಗುತ್ತಿದ್ದಾರೆ ಎಂದು ಮಹಾರಾಷ್ಟ್ರದ ಪುಣೆ ಮಹಾನಗರ ಪಾಲಿಕೆಯ ಸಹಾಯಕ ವೈದ್ಯಾಧಿಕಾರಿ ಡಾ.ಸಂಜೀವ್ ವಾವರೆ ಹೇಳಿದ್ದಾರೆ. ಇದನ್ನೂ ಓದಿ: ಮೆಕ್ಸಿಕೋ ಅಪಘಾತ – 49 ಮಂದಿ ಸಾವು, 58 ಮಂದಿಗೆ ಗಾಯ

CORONA 3 1

ರೋಗಿಗೆ 40 ವರ್ಷ ವಯಸ್ಸಾಗಿದ್ದು, ಇವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿರುವ ಮೊದಲ ಓಮಿಕ್ರಾನ್ ಸೋಂಕಿತರಾಗಿದ್ದಾರೆ. ಸದ್ಯ ಮನೆಗೆ ಹಿಂದಿರುಗುತ್ತಿರುವ ಬಗ್ಗೆ ರೋಗಿ ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ರೋಗಿಯ ಜೊತೆಗೆ ಸಂಪರ್ಕ ಹೊಂದಿದ್ದ 40 ಮಂದಿಯಲ್ಲಿ ಯಾರಿಗೂ ಸಹ ಕೊರೊನಾ ದೃಢಪಟ್ಟಿರಲಿಲ್ಲ. ರೋಗಿ ಜೂನ್‍ನಲ್ಲಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದ ಎಂದು ತಿಳಿಸಲಾಗಿದೆ. ಸದ್ಯ ರೋಗಿ ಯಾವುದೇ ಗುಣಲಕ್ಷಣಗಳಿಲ್ಲದೇ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಾರೆ. ಇದನ್ನೂ ಓದಿ:  ಕೇರಳದ ಆಲಪ್ಪುಳದಲ್ಲಿ ಹಕ್ಕಿಜ್ವರ – ಕೋಳಿ, ಮೊಟ್ಟೆ ನಾಶಕ್ಕೆ ಸರ್ಕಾರ ಆದೇಶ

ಪುಣೆಯಲ್ಲಿ ಪತ್ತೆಯಾದ ಮೊದಲ ಓಮಿಕ್ರಾನ್ ಸೋಂಕಿಗೆ ಒಳಗಾಗಿದ್ದ ಇವರಿಗೆ 10 ದಿನಗಳ ಕ್ವಾರಂಟೈನ್ ಬಳಿಕ ಗುರುವಾರ ಕೊರೊನಾ ನೆಗೆಟಿವ್ ಬಂದಿದೆ. ಸದ್ಯ ಮಹಾರಾಷ್ಟ್ರದಲ್ಲಿ ಗುರುವಾರ ಯಾವುದೇ ಕೊರೊನಾ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ಅದನ್ನು ಹೊರತುಪಡಿಸಿ ರಾಜ್ಯದಲ್ಲಿ ಒಟ್ಟು 10 ಓಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ಇನ್ನೂ ಓಮಿಕ್ರಾನ್ ಭೀತಿಯಿಂದ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿದೇಶಿಗರನ್ನು ಕ್ವಾರಂಟೈನ್‍ಗೊಳಿಸಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *