ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ (Pune) ಅಪ್ರಾಪ್ತನ ನಿರ್ಲಕ್ಷ್ಯಕ್ಕೆ ಇಬ್ಬರ ಜೀವ ಬಲಿ ಪಡೆದಿದೆ. ಈ ಪ್ರಕರಣದಲ್ಲಿ ಅಪ್ರಾಪ್ತನಿಗೆ ಜಾಮೀನು (Bail) ನೀಡುವ ಸಮಯದಲ್ಲಿ ಕೋರ್ಟ್ (Court) ವಿಧಿಸಿದ ಷರತ್ತು ಚರ್ಚೆಗೆ ಗ್ರಾಸವಾಗಿದೆ.
ಭಾನುವಾರ ರಾತ್ರಿ ಪ್ರತಿಷ್ಠಿತ ಬಿಲ್ಡರ್‌ನ 17 ವರ್ಷದ ಪುತ್ರನೊಬ್ಬ ಮದ್ಯದ ಅಮಲಿನಲ್ಲಿ ಐಷಾರಾಮಿ ಪೋರ್ಶೆ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಇಬ್ಬರ ಟೆಕ್ಕಿಗಳನ್ನ ಬಲಿ ಪಡೆದಿದ್ದ.
#Pune Porsche Accident: CCTV footage captures a speeding Porsche just before the accident in Kalyani Nagar. pic.twitter.com/q3N2yk4uyM
— Pune Pulse (@pulse_pune) May 20, 2024
ಆರೋಪಿಯನ್ನು ಬಂಧಿಸಿದ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಸಂದರ್ಭದಲ್ಲಿ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು. 15 ದಿನ ಟ್ರಾಫಿಕ್ ಪೊಲೀಸರ ಜೊತೆ ಕೆಲಸ ಮಾಡಬೇಕು. ಮಾನಸಿಕ ತಜ್ಞರಿಂದ ಕೌನ್ಸಿಲಿಂಗ್ ತೆಗೆದುಕೊಳ್ಳಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ಇದನ್ನೂ ಓದಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಗೌರವಾರ್ಥ ಮಂಗಳವಾರ ಭಾರತದಲ್ಲಿ ಶೋಕಾಚರಣೆ
ಇದು ಭಾರೀ ಚರ್ಚೆಗೆ ಗುರಿಯಾಗಿದೆ. ಇಬ್ಬರ ಸಾವಿಗೆ ಇದೇನಾ ನ್ಯಾಯ ಎಂದು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.