ಮುಂಬೈ: ಎನ್‌ಸಿಪಿ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಟೆಕ್ಕಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಾಗರ್ ಬರ್ವೆ ಖಾಸಗಿ ಸಂಸ್ಥೆಯೊಂದರ ಡೇಟಾ ಫೀಡಿಂಗ್ ಮತ್ತು ಅನಾಲಿಟಿಕ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರ‍್ಯಾಂಪ್‌ವಾಕ್ ಮಾಡ್ತಿದ್ದಾಗ ಕಬ್ಬಿಣದ ಪಿಲ್ಲರ್ ಬಿದ್ದು 24ರ ಮಾಡೆಲ್ ದುರ್ಮರಣ
Advertisement
Advertisement
ಪ್ರಕರಣದ ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರು ಆರೋಪಿಯನ್ನು ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಮಂಗಳವಾರದ ವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
Advertisement
ಶರದ್ ಪವಾರ್ ವಿರುದ್ಧ ಆರೋಪಿ ಫೇಸ್‌ಬುಕ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ. ಬೆದರಿಕೆಗಳನ್ನು ಪೋಸ್ಟ್ ಮಾಡಲು ಆತ ಎರಡು ನಕಲಿ ಖಾತೆಗಳನ್ನು ರಚಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮುಂದೆ ತಮಿಳು ನಾಯಕನಿಗೆ ಪ್ರಧಾನಿ ಪಟ್ಟ: ಅಮಿತ್ ಶಾ
Advertisement
ಆಪಾದಿತ ಬೆದರಿಕೆಗಳಿಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮಾಜಿ ಸಿಎಂಗೆ ಭದ್ರತೆಯನ್ನು ಹೆಚ್ಚಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಎನ್‌ಸಿಪಿಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ, ಪ್ರಮುಖ ವಿರೋಧ ಪಕ್ಷದ ನಾಯಕನಿಗೆ ಬೆದರಿಕೆ ಹಾಕುವುದನ್ನು ಸಹಿಸಲಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿದ್ದಾರೆ.