ಮಾರ್ಚ್ 3 ರಿಂದ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅಗಲಿದ ಇಬ್ಬರು ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದರಿಗೆ ಗೌರವ ಸಲ್ಲಿಸುವ ಕಾರ್ಯ ನಡೆಯಲಿದೆ. ಇದನ್ನೂ ಓದಿ : ಹೊಸ ಮುಖಗಳ ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್
ಇತ್ತೀಚೆಗಷ್ಟೇ ನಿಧನರಾದ ಪುನೀತ್ ರಾಜ್ ಕುಮಾರ್ ಮತ್ತು ಕಳೆದ ವರ್ಷ ಅಗಲಿರುವ ಸಂಚಾರಿ ವಿಜಯ್ ಅವರ ನೆನಪಿಗಾಗಿ ಚಿತ್ರೋತ್ಸವದಲ್ಲಿ ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ ಕರ್ನಾಟಕ ಚಲನಚಿತ್ರ ಅಕಾಡಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್.
ಪುನೀತ್ ಮತ್ತು ಸಂಚಾರಿ ವಿಜಯ್ ನಟನೆಯ ಚಿತ್ರಗಳ ಪ್ರದರ್ಶನ, ಅವರ ಸಾಧನೆ ಅವಲೋಕನ ಹಾಗೂ ಪುನೀತ್ ಮತ್ತು ವಿಜಯ್ ಕುರಿತಾಗಿ ಗಣ್ಯರು ಈ ಸಂದರ್ಭದಲ್ಲಿ ಮಾತನಾಡಲಿದ್ದಾರೆ. ಇದನ್ನೂ ಓದಿ: ರಣವೀರ್ ಹೊಸ ಸ್ಟೈಲ್‍ಗೆ ಆಲಿಯಾ ಬೌಲ್ಡ್
ಪುನೀತ್ ಬಾಲ್ಯದಲ್ಲಿಯೇ ‘ಬೆಟ್ಟದ ಹೂವು’ ಚಿತ್ರಕ್ಕಾಗಿ ಅತ್ಯುತ್ತಮ ಬಾಲ ನಟ ರಾಷ್ಟ್ರ ಪ್ರಶಸ್ತಿ ಪಡೆದರೆ, ಸಂಚಾರಿ ವಿಜಯ್ ‘ನಾನು ಅವನಲ್ಲ ಅವಳು’ ಸಿನಿಮಾದ ನಟನೆಗಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದವರು. ಹೀಗಾಗಿ ಇಬ್ಬರೂ ಕಲಾವಿದರನ್ನು ಸಿನಿಮೋತ್ಸವದಲ್ಲಿ ಸ್ಮರಿಸಿಕೊಳ್ಳಲಾಗುತ್ತಿದೆ. ಇದನ್ನೂ ಓದಿ :ಎಂತವರಿಗೂ ಮರುಕ ಹುಟ್ಟಿಸುತ್ತೆ ಕನ್ನೇರಿ ಚಿತ್ರದ ‘ಕಾಣದ ಊರಿಗೆ ಕೂಲಿಗೆ ಹೊರಟವಳೆ’ ಹಾಡು
ಈಗಾಗಲೇ ಸಿನಿಮೋತ್ಸವಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ ಚಲನಚಿತ್ರ ಅಕಾಡಮಿ. ಸಿನಿಮಾಗಳ ಪ್ರದರ್ಶನ, ಸಿನಿಮಾಗಳ ಕುರಿತಾದ ಚರ್ಚೆ, ಅಂತಾರಾಷ್ಟ್ರೀಯ ನಿರ್ದೇಶಕರುಗಳ ಜತೆ ಸಂವಾದ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜನೆ ಮಾಡಲಾಗಿದೆ.