CinemaDistrictsHealthKarnatakaLatestMain PostSandalwood

‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ಕ್ಕೆ ಪುನೀತ್ ರಾಜ್ ಕುಮಾರ್ ರಾಯಭಾರಿ

ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು ನಟ ಪುನೀತ್ ರಾಜ್ ಕುಮಾರ್. ಈ ಮೂಲಕ ಲಕ್ಷಾಂತರ ಜನರಿಗೆ ಪ್ರೇರಣೆಯೂ ಆಗಿದ್ದರು. ಹಾಗಾಗಿ ಪುನೀತ್ ರಾಜ್ ಕುಮಾರ್ ಅವರನ್ನು ‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಅರಿವು ಅಭಿಯಾನದ ರಾಯಭಾರಿಯನ್ನಾಗಿ ಮಾಡಲಾಗಿದೆ. ಮಂಗಳವಾರವಷ್ಟೇ ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

ಆರೋಗ್ಯ ಇಲಾಖೆ, ಡಾ.ರಾಜ್ ಕುಮಾರ್ ಟ್ರಸ್ಟ್ ಮತ್ತು ಎಸ್ಸಿರ್ಲಾ ವಿಷನ್ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ್ ಬೊಮ್ಮಾಯಿ, ‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಅಭಿಯಾನಕ್ಕೆ ಚಾಲನೆ ನೀಡಿದರು. ತಮ್ಮ ಮೇಲೆ ಪುನೀತ್ ಅವರ ಪ್ರಭಾವ ಹೇಗೆ ಆಗಿದೆ ಎನ್ನುವ ಕುರಿತು ಈ ಸಂದರ್ಭದಲ್ಲಿ ಮಾತನಾಡಿದರು. ಪ್ರತಿ ಸಲವೂ ಪುನೀತ್ ಅವರ ಹೆಸರಿನ ಕಾರ್ಯಕ್ರಮಕ್ಕೆ ಬಂದಾಗ ನನಗೆ ಹೊಸ ಚೈತನ್ಯ ಬರಲಿದೆ’ ಎಂದರು. ಇದನ್ನೂ ಓದಿ: ರಣಬೀರ್ ಕಪೂರ್‌ಗೆ ಪತ್ನಿ ಆಗ್ತಾರಾ ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ?

ಈ ಕಾರ್ಯಕ್ರಮದಲ್ಲಿ ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡ ಭಾಗಿಯಾಗಿದ್ದರು. ಈ ಅಭಿಯಾನದ ಕುರಿತು ಸುದೀರ್ಘ ಟ್ವಿಟ್ ಮಾಡಿರುವ ಅಶ್ವಿನಿ, ‘ಇದು ಡಾ|| ಪುನೀತ್ ಅವರ ಸಾಮಾಜಿಕ ಕಳಕಳಿ, ಅವಕಾಶ ವಂಚಿತರಿಗೆ ದೃಷ್ಟಿಯನ್ನು ಕಲ್ಪಿಸುವ ಸಲುವಾಗಿ ಇದ್ದ ಬದ್ಧತೆ, ದೂರದೃಷ್ಠಿತ ಹಾಗೂ ನಿಷ್ಠೆಗೆ ನಾವು ಸಲ್ಲಿಸುವ ಭಾವಪೂರ್ಣ ಗೌರವ. ಡಾ|| ರಾಜ್‌ಕುಮಾರ್ ಟ್ರಸ್ಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಸ್ಸಿಲಾರ್ ವಿಷನ್ ಪ್ರತಿಷ್ಠಾನ ಇವರ ಸಹಭಾಗಿತ್ವದಲ್ಲಿ ‘ನಮ್ಮ ದೃಷ್ಟಿ – ನಮ್ಮ ಕರ್ನಾಟಕ’ ಅರಿವು ಅಭಿಯಾನವನ್ನು ನೆನ್ನೆ ಕಾರ್ಯಾರಂಭ ಮಾಡಲಾಯಿತು’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ರಶ್ಮಿಕಾ ವೀಡಿಯೋ ನೋಡಿ ಸುಸ್ತಾದ ಅಭಿಮಾನಿಗಳು – ಕೊಡಗಿನ ಬೆಡಗಿಯ ಜಿಮ್ ಕಸರತ್ತು

ಅಲ್ಲದೇ, ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ನಟ ರಾಘವೇಂದ್ರ ರಾಜ್ ಕುಮಾರ್, ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಉಪಸ್ಥಿತರಿದ್ದರು.

Leave a Reply

Your email address will not be published.

Back to top button