ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪುನೀತ್

Public TV
1 Min Read
puneeth 3 1

ಮಾ.3 ರಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಇಂದು ಪುನೀತ್ ರಾಜ್ ಕುಮಾರ್ ಗಾಗಿಯೇ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿತ್ತು. ಪುನೀತ್ ಸ್ಮರಣೆಯ ಜತೆಗೆ ಪುನೀತ್ ಅವರ ಜತೆ ಕೆಲಸ ಮಾಡಿದ ನಿರ್ದೇಶಕರು ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ವೇದಿಕೆ ಕಲ್ಪಿಸಲಾಗಿತ್ತು. ಇದನ್ನೂ ಓದಿ : ತಮಿಳಿನತ್ತ ಲವ್ ಗುರು ನಿರ್ದೇಶಕ ಪ್ರಶಾಂತ್ ರಾಜ್

Puneeth 4 1

ಪುನೀತ್ ರಾಜ್ ಕುಮಾರ್ ನಟನೆಯ ಚಿತ್ರಗಳಿಗೆ ನಿರ್ದೇಶನ ಮಾಡಿರುವ ಪವನ್ ಒಡೆಯರ್, ಸಂತೋಷ್ ಆನಂದ್ ರಾಮ್, ಚೇತನ್ ಕುಮಾರ್ ಮತ್ತು ಹಿರಿಯ ನಿರ್ದೇಶಕ ಭಗವಾನ್, ಪುನೀತ್ ಅವರ ಜತೆಗಿನ ತಮ್ಮ ಒಡನಾಟವನ್ನು ಬಿಚ್ಚಿಟ್ಟರು. ಒಂದು ರೀತಿಯಲ್ಲಿ ಈ ಕಾರ್ಯಕ್ರಮ ಭಾವುಕತೆಯಿಂದಲೇ ಶುರುವಾಗಿ, ಭಾವುಕತೆಯಿಂದಲೇ ಮುಕ್ತಾಯವಾಯಿತು. ಇದನ್ನೂ ಓದಿ : ಸಾಯಿ ಪಲ್ಲವಿಗೆ ‘ಸಾಯಿ’ ಹೆಸರು ಬಂದಿದ್ದು ಹೇಗೆ?

puneeth 2

ಪುನೀತ್ ನಟನೆಯ ಚಿತ್ರಗಳನ್ನು ವಿಶ್ಲೇಷಿಸುವುದರ ಜತೆಗೆ ಅವರು ಪಾತ್ರಕ್ಕಾಗಿ ಮಾಡಿಕೊಳ್ಳುತ್ತಿದ್ದ ತಯಾರಿ, ಅವರಿಗಾಗಿಯೇ ಪಾತ್ರಗಳನ್ನು ಬರೆಯುತ್ತಿದ್ದ ರೀತಿ ಮತ್ತು ಅವರು ಶೂಟಿಂಗ್ ಸೆಟ್ ನಲ್ಲಿ ಹೇಗೆಲ್ಲ  ಇರುತ್ತಿದ್ದರು ಎನ್ನುವ ಕುರಿತು ನಿರ್ದೇಶಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಕೂಡ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *