ತುಮಕೂರು: ನಟ ಪುನೀತ್ ರಾಜ್‌ಕುಮಾರ್ ನಿಧನದ ಶೋಕದಲ್ಲಿದ್ದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ತುಮಕೂರಿನ ಹಿರೇಹಳ್ಳಿಯ ಅಪ್ಪು ಶ್ರೀನಿವಾಸ್ (32) ಮೃತ ದುರ್ದೈವಿ. ಶ್ರೀನಿವಾಸ್ ಅವರು ಸತತ ಎರಡು ದಿನ ಪುನೀತ್ ಅಂತಿಮ ದರ್ಶನ ಪಡೆದಿದ್ದರು. ಅಂತಿಮ ದರ್ಶನ ಪಡೆದು ಮನೆಗೆ ಮರಳಿದಾಗ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚಪ್ಪಲಿ ತೆಗೆದು ಅಭಿಮಾನಿಗಳಿಂದ ಅಪ್ಪುಗೆ ಅಂತಿಮ ನಮನ- ಬಿಬಿಎಂಪಿಯಿಂದ ರಾಶಿ ರಾಶಿ ಸ್ಲಿಪ್ಪರ್ಸ್ ತೆರವು
ನಿನ್ನೆ ಹೆಬ್ಬೂರಿನಲ್ಲಿ ಭರತ್ ಎಂಬ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದ ಬೆನ್ನಲ್ಲೇ ಇಂದು ಮತ್ತೋರ್ವ ಅಭಿಮಾನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಇಬ್ಬರು ಪುನೀತ್ ಅಭಿಮಾನಿಗಳ ಸಾವು ಸಂಭವಿಸಿದೆ. ಇದನ್ನೂ ಓದಿ: ಅಪ್ಪು ಸಾವನ್ನು ಸಹಿಸಲಾಗ್ತಿಲ್ಲ, ಪುನೀತ್‍ರಂತೆ ನನ್ನ ಕಣ್ಣನ್ನೂ ದಾನ ಮಾಡಿ- ಅಭಿಮಾನಿ ಆತ್ಮಹತ್ಯೆ
ನಟ ಪುನೀತ್ ರಾಜ್‌ಕುಮಾರ್ ಅವರು ಹೃದಯ ಸ್ತಂಭನದಿಂದ ನಿಧನರಾದರು. ನೆಚ್ಚಿನ ನಟನ ನಿಧನದಿಂದ ವಿಚಲಿತರಾಗಿರುವ ಅಭಿಮಾನಿಗಳಲ್ಲಿ ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.