ನಾಳೆ ಬೆಂಗಳೂರಿನಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಸರಕಾರವು ಅಧಿಕೃತವಾಗಿ ಪುನೀತ್ ಕುಟುಂಬಕ್ಕೆ ಆಹ್ವಾನ ನೀಡಿದೆ. ಪುನೀತ್ ಮನೆಗೆ ಆಗಮಿಸಿದ್ದ ಸಚಿವರಾದ ಆರ್.ಅಶೋಕ್ ಮತ್ತು ಸುನೀಲ್ ಕುಮಾರ್ ಆಗಮಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಅವರನ್ನು ಗೌರವಿಸುವ ಮೂಲಕ ಆಹ್ವಾನ ನೀಡಲಾಯಿತು.
Advertisement
ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ವಿಧಾನ ಸೌಧ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದನ್ನೂ ಓದಿ:ದಆಮೀರ್ ಖಾನ್ ತಾಯಿಗೆ ಹೃದಯಾಘಾತ
Advertisement
Advertisement
ಸಂಜೆ 4 ಗಂಟೆಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಇಂದು ಪುನೀತ್ ಮನೆಗೆ ಆಗಮಿಸಿದ್ದ ಸಚಿವ ಆರ್. ಅಶೋಕ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ದಾರೆ.
Advertisement
ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ವಿಧಾನ ಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೆರೆ ಅವರು ಗೌರವ ಉಪಸ್ಥಿತಿ ಇರಲಿದೆ. ಸಚಿವರಾದ ಆರ್. ಅಶೋಕ್ ಹಾಗೂ ವಿ ಸುನೀಲ್ ಕುಮಾರ್ ಅವರ ಘನ ಉಪಸ್ಥಿತಿ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಸೇರಿದಂತೆ ಹಲವರು ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.