ಹಾಸನ: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪದ ಮೇಲೆ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯವರನ್ನು (Puneeth Kerehalli) ಕುಮಾರಸ್ವಾಮಿ ಲೇಔಟ್ ಪೊಲೀಸರು (Police) ಬಂಧಿಸಿದ್ದಾರೆ.
ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಅಬ್ದುಲ್ ರಜಾಕ್ ಎಂಬವರು ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ, ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ಅವರ ನಿವಾಸದ ಮೇಲೆ ಪೊಲೀಸರು ದಾಳಿ ಮಾಡಿ, ಬಂಧಿಸಿ ಕರೆದೊಯ್ದಿದ್ದಾರೆ. ಬಂಧನದ ವೇಳೆ ಸರ್ಕಾರದ ವಿರುದ್ಧ ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಇ-ರಿಕ್ಷಾ ಹ್ಯಾಕ್ – ವಿಡಿಯೋ ವೈರಲ್ ಬೆನ್ನಲ್ಲೇ 3 ಚೀನಿ ಆ್ಯಪ್ ಬ್ಯಾನ್

ನನಗೆ ಜೀವ ಬೆದರಿಕೆ ಇದೆ, ಅಬ್ದುಲ್ ರಜಾಕ್ ವಿರುದ್ಧ ನಾನು ದೂರು ಕೊಟ್ಟಿದ್ದೇನೆ. ಅವನನ್ನು ಬಂಧಿಸದೇ ನನ್ನನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಪುನೀತ್ ಕೆರೆಹಳ್ಳಿ ಬಂಧಿಸುತ್ತಿದ್ದಂತೆ ಅವರ ತಾಯಿ ಕಣ್ಣೀರಿಟ್ಟಿದ್ದಾರೆ. ಈ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: SIR ಪ್ರಕ್ರಿಯೆಯಲ್ಲಿ ಲೋಪ ಆಗಿದ್ದರೆ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಲಿ: ಪ್ರಿಯಾಂಕ್ ಖರ್ಗೆ
