– ಕಾಲ್ತುಳಿತಕ್ಕೆ ಮೂವರಿಗೆ ಗಾಯ
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರೀತಿಯ ಅಪ್ಪು ಅಕಾಲಿಕ ನಿಧನ ಇಡೀ ಚಿತ್ರರಂಗ, ಅಭಿಮಾನಿಗಳು ಹಾಗೂ ರಾಜ್ಯಕ್ಕೆ ಆಘಾತ ತಂದಿದೆ. ನಗರದ ಕಂಠೀರವ ಸ್ಟೇಡಿಯಂನಲ್ಲಿ ನಟನ ಅಂತಿಮ ದರ್ಶನ ನಡೆಯುತ್ತಿದ್ದು, ಅಭಿಮಾನಿಗಳ ಸಾಗರವೇ ನೆರೆದಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಪುನೀತ್ ಅಂತಿಮ ದರ್ಶನಕ್ಕೆ ಅಭಿಮಾನಿಗಳು ಬರುತ್ತಿದ್ದಾರೆ. ರಾತ್ರಿಯಿಡೀ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರೂ ಜನಸಾಗರ ಇನ್ನೂಕರಗಿಲ್ಲ. ಬೆಳಗ್ಗಿನ ಜಾವ ಆಗ್ತಿದ್ರೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಪೊಲೀಸರು ಕೂಡ ಜನರನ್ನ ತಾಳ್ಮೆಯಿಂದ ನಿಯಂತ್ರಿಸುತ್ತಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ಕೊನೆಯದಾಗಿ ವಿಶೇಷ ಪೋಸ್ಟ್ ಮಾಡಿದ್ದ ಅಪ್ಪು
ಉತ್ತರ ಕರ್ನಾಟಕ ಭಾಗದಿಂದ ಬಸ್ ಗಳನ್ನು ಮಾಡಿಕೊಂಡು ಅಭಿಮಾನಿಗಳು ಅಪ್ಪು ಅಂತಿಮ ದರ್ಶನ ಪಡೆಯಲು ಬಂದಿದ್ದಾರೆ. ಮಕ್ಕಳು, ಯುವಕರು, ವಯೋವೃದ್ಧರು ಕೂಡ ಅಂತಿಮ ದರ್ಶನ ಪಡೆಯುತ್ತಿದ್ದು, ಬೆಳಗ್ಗೆ ಗಂಟೆ ಐದಾದ್ರು ಅಭಿಮಾನಿ ಸಮೂಹ ಮುಗಿಯಲಿಲ್ಲ. ನೆಚ್ಚಿನ ನಾಯಕನ ಅಂತಿಮ ದರ್ಶನಕ್ಕೆ ರಾತ್ರಿಯಿಡೀ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿತ್ತು. ಇನ್ನು ಅಂತಿಮ ದರ್ಶನ ಪಡೆಯುತ್ತಿದ್ದ ಸಂದರ್ಭದಲ್ಲಿ ಕಾಲ್ತುಳಿತದಿಂದ ಮೂವರು ಗಾಯಗೊಂಡಿರುವ ಪ್ರಸಂಗ ಕೂಡ ನಡೆದಿದೆ. ಇದನ್ನೂ ಓದಿ: 2 ಗಂಟೆ ವ್ಯಾಯಾಮ, ಮೂರು ಗಂಟೆ ಐಸಿಯುನಲ್ಲಿ ಚಿಕಿತ್ಸೆ – ಪುನೀತ್ ಕೊನೆಕ್ಷಣ ಹೀಗಿತ್ತು
ಸಮಯ ಕಳೆದಂತೆ ಅಭಿಮಾನಿಗಳು ಸಂಖ್ಯೆ ಈಗ ಮತ್ತಷ್ಟು ಹೆಚ್ಚಾಗುತ್ತಿದೆ. ಬೆಳಗಾಗುತ್ತಿದ್ದಂತೆ ಮತ್ತಷ್ಟು ಜನ ಕಂಠೀರವ ಸ್ಟೂಡಿಯೋ ನತ್ತ ಆಗಮಿಸುತ್ತಿದ್ದಾರೆ. ರಾಜ್ಯ ಮತ್ತು ಅಂತರಾಜ್ಯಗಳಿಂದ ಜನ ಬರುತ್ತಿದ್ದಾರೆ. ಸೂರ್ಯೋದಯ ಬಳಿಕ ಮತ್ತಷ್ಟು ಜನ ಹೆಚ್ಚಾಗೋ ಸಾಧ್ಯತೆ ಇದ್ದು, ಬೆಳಗಾಗುತ್ತಿದ್ದಂತೆ ಪೊಲೀಸರು ಮತ್ತಷ್ಟು ಅಲರ್ಟ್ ಆಗುತ್ತಿದ್ದಾರೆ. ಇದನ್ನೂ ಓದಿ: ಯುವಕರ ಕಣ್ಮಣಿ, ಯೂತ್ ಐಕಾನ್ ಆಗಿದ್ರು ಪುನೀತ್- ಸಿಎಂ
ನಿನ್ನೆ ಬೆಳಗ್ಗೆ ಅಪ್ಪುಗೆ ಹೃದಯಾಘಾತವಾಗಿತ್ತು. ಕೂಡಲೇ ಅವರು ಸ್ಥಳೀಯ ರಮಣಶ್ರೀ ಕ್ಲಿನಿಕ್ ಗೆ ತೆರಳಿದ್ದಾರೆ. ಅಲ್ಲಿ ಇಸಿಜಿ ಮಾಡಿಸಿಕೊಂಡು ಇನ್ನೇನು ಮನೆ ಕಡೆ ತೆರಳುವಷ್ಟರಲ್ಲಿ ಅಲ್ಲಿಯೇ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಕಾರಿನಲ್ಲಿಯೇ ವಿಕ್ರಂ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಪುನೀತ್ ಪುತ್ರಿ ಅಮೆರಿಕದಲ್ಲಿದ್ದು, ಅವರ ಬರುವಿಕೆಯ ನಂತರ ಅಂತ್ಯಕ್ರಿಯೆ ನಡೆಯಲಿದೆ.