ಅಪ್ಪು ಹುಟ್ಟುಹಬ್ಬ, ಜೇಮ್ಸ್ ಸಂಭ್ರಮಾಚರಣೆಯಲ್ಲಿ ಅಭಿಮಾನಿ ಸಾವು

Public TV
1 Min Read
puneethrajkumar fans

ಮೈಸೂರು: ಅಪ್ಪು ಹುಟ್ಟುಹಬ್ಬ ಮತ್ತು ಜೇಮ್ಸ್ ಸಂಭ್ರಮಾಚರಣೆಯಲ್ಲಿ ಅಪ್ಪು ಅಭಿಮಾನಿ ಕುಸಿದು ಬಿದ್ದು, ಸಾವನ್ನಪ್ಪಿರುವ ಘಟನೆ ನಡೆದಿದೆ.

ಆಕಾಶ್ (22) ಸಂಭ್ರಮಾಚರಣೆಯಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ.

puneeth rajkumar

ನಿನ್ನೆ ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬ ಮತ್ತು ಜೇಮ್ಸ್ ಸಂಭ್ರಮಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಆಕಾಶ್ ಕುಸಿದು ಬಿದ್ದಿದ್ದ. ಆಕಾಶ್‍ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಆಕಾಶ್ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ : ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

puneethrajkumar fans 1

ಅದ್ದೂರಿ ಮತ್ತು ಸಡಗರ ಸಂಭ್ರಮದಿಂದ ಜೇಮ್ಸ್ ಮತ್ತು ಅಪ್ಪು ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿತ್ತು.ಹೆಡಿಯಾಲ ಗ್ರಾಮದ ಬಸ್ ನಿಲ್ದಾಣದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *