ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ನಮ್ಮನೆಲ್ಲ ಬಿಟ್ಟು ದೂರವಾಗಿದ್ದಾರೆ. ಅಪ್ಪುಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಿಮ ನಮನ ಸಲ್ಲಿಸಿದ್ದಾರೆ.
ಮುಂಜಾನೆ 4.28 ಸಿಎಂ ಆಗಮನ ಕಂಠೀರವ ಸ್ಟೇಡಿಯಂ ಆಗಮಿಸಿ 4.34 ಸಿಎಂ ವೇದಿಕೆ ಬಳಿ ಆಗಮಿಸಿ ಶಿವಣ್ಣ ಜೊತೆ ಮಾತುಕತೆ ನಡೆಸಿದ್ದಾರೆ. ಬಳಿಕ ಬಸವರಾಜ ಬೊಮ್ಮಾಯಿ ಅವರು ಅಪ್ಪು ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ್ದಾರೆ. ಕುಟುಂಬಸ್ಥರು, ಅಭಿಮಾನಿಗಳು, ಗಣ್ಯರು ಪುನೀತ್ ಅವರ ಪಾರ್ಥಿವ ಶರೀರದ ದರ್ಶನವನ್ನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಪುನೀತ್ ಸಾವು ದೊಡ್ಡ ಅನ್ಯಾಯ: ಸೃಜನ್ ಲೋಕೇಶ್
ಈಗಾಗಲೇ ಅಪ್ಪು ಅಂತೀಮ ಯಾತ್ರೆ ತೆರೆದ ವಾಹನವಲ್ಲಿ ಪ್ರಾರಂಭವಾಗಿದೆ. ಯಾತ್ರೆಯಲ್ಲಿ ಅಭಿಮಾನಿಗಳ ಸಾಗರವೇ ಇದ್ದು, ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತ್ಯಕ್ರಿಯೆಯಲ್ಲಿ ಸಾರ್ವಜನಿಕರಿಗೆ ಅವಕಾಶ ವಿಲ್ಲ. ಪಾರ್ಥಿವ ಶರೀರದ ಜೊತೆಗೆ ಶಿವರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಅವರು ಇದ್ದಾರೆ. ಈಡಿಗ ಸಂಪ್ರದಾಯದಂತೆ ಪುನೀತ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಪುನೀತ್ ನೆನೆದು ನಟಿ ರಾಧಿಕಾ ಕುಮಾರಸ್ವಾಮಿ ಕಣ್ಣೀರು