ಬೆಂಗಳೂರು: ಕನ್ನಡ ಚಿತ್ರರಂಗದ ಯುವರತ್ನ, ನಟ ಪುನೀತ್ ರಾಜ್‍ಕುಮಾರ್ ಅವರ ನಿಧನಕ್ಕೆ ಕಲಾವಿದರು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಕಂಠೀರವ ಸ್ಟೇಡಿಯಂಗೆ ಜನಸಾಗರವೇ ಹರಿದು ಬರುತ್ತಿದೆ.
Advertisement
ಪುನೀತ್ ರಾಜ್‍ಕುಮಾರ್ ಅವರ ಪಾರ್ಥವ ಶರೀರವನ್ನು ನೋಡುತ್ತಿದ್ದಂತೆ ತೆಲುಗು ನಟ ನಂದಮೂರಿ ಬಾಲಕೃಷ್ಣ ಅವರು ಕಣ್ಣೀರು ಹಾಕಿದ್ದಾರೆ. ಅಂತಿಮ ದರ್ಶನ ಪಡೆದ ಬಳಿಕ ಶಿವರಾಜ್ ಕುಮಾರ್ ಅವರಿಗೆ ಧೈರ್ಯ ತುಂಬಿದ್ದಾರೆ ಹಾಗೂ ರಾಜ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಇದನ್ನೂ ಓದಿ: ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ
Advertisement
Advertisement
ಇತ್ತ ಬಾಲಿವುಡ್ ನಟ ಪ್ರಭುದೇವ್ ಅವರು ಕೂಡ ಇಂದು ಬೆಂಗಳೂರಿಗೆ ಆಗಮಿಸಿ ಅಪ್ಪು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದದು ದುಃಖಿತರಾಗಿದ್ದಾರೆ. ಮಧ್ಯರಾತ್ರಿಯಿಂದಲೂ ಅಪ್ಪು ಅಭಿಮಾನಿಗಳ ಸಾಗರ ಕರಗಿಲ್ಲ. ಅಭಿಮಾನಿಗಳ ಜೊತೆ ಸೆಲೆಟಬ್ರಿಗಳು ಕೂಡ ನೆಚ್ಚಿನ ನಟನ ಅಂತಿಮ ದರ್ಶನ ಪಡೆದು ಕಣ್ಣೀರಾಗುತ್ತಿದ್ದಾರೆ. ಇದನ್ನೂ ಓದಿ: ರಾಜಕುಮಾರನಂತೆ ಬಾಳಬೇಕಿದ್ದ ನನ್ನ ತಮ್ಮ ಇನ್ನಿಲ್ಲ ಅಂತಂದ್ರೆ ನಂಬಲು ಅಸಾಧ್ಯ: ಸುಧಾರಾಣಿ
Advertisement
ಈಗಾಗಲೇ ಅಪ್ಪು ಮೊದಲ ಮಗಳು ಅಮೆರಿಕಾದಿಂದ ಹೊರಟಿದ್ದು, ಸಂಜೆಯ ವೇಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೀಗಾಗಿ ನಟನ ಅಂತ್ಯಕ್ರಿಯೆಯನ್ನು ಇಂದು ಸಂಜೆ 5.30ರ ಸುಮಾರಿಗೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಅಭಿಮಾನಿಗಳಿಗೆ ಇಂದು ಮಧ್ಯಾಹ್ನ 3 ಗಂಟೆಯವರಿಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಂತರ ಕಂಠೀರವ ಸ್ಟುಡಿಯೋದವರೆಗೂ ಮೆರವಣಿಗೆ ನಡೆಸಲಾಗುತ್ತದೆ. ಹೀಗಾಗಿ ಕುಟುಂಬಸ್ಥರು 3 ಗಂಟೆಯ ಬಳಿಕ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬರದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅಪ್ಪು ಅಗಲಿಕೆಗೆ ಮಂತ್ರಾಲಯ ಶ್ರೀಗಳಿಂದ ಸಂತಾಪ
ಪುನೀತ್ ಪುತ್ರಿ ಧ್ರುತಿ ನ್ಯೂಯಾರ್ಕ್‍ನಿಂದ ದೆಹಲಿಗೆ ಆಗಮಿಸಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಸಂಜೆ 4.15ಕ್ಕೆ ಆಗಮಿಸಲಿದ್ದಾರೆ. ಧ್ರುತಿ ಅವರು ಬಂದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇವಲ ಆಪ್ತವಲಯಕ್ಕಷ್ಟೇ ಅವಕಾಶ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: ಅಪ್ಪು ಅಗಲಿಕೆಗೆ ಮಂತ್ರಾಲಯ ಶ್ರೀಗಳಿಂದ ಸಂತಾಪ
ಪುನೀತ್ ಒಬ್ಬ ಒಳ್ಳೆ ಮನುಷ್ಯನಾಗಿದ್ದರು. ಅವರ ಅಗಲಿಕೆ ಆತಂಕವನ್ನುಂಟು ಮಾಡಿದೆ. ಅವರು ನನ್ನ ಸಂಬಂಧ ಅಣ್ಣ, ತಮ್ಮನ ಸಂಬಂಧವಾಗಿದೆ. ಒಂದೇ ತಾಯಿ ಮಕ್ಕಳಂತೆ ಇದ್ದೆವು. ಸಹೋದರಂತೆ ಬದುಕಿದ್ದೇವು. ನನ್ನ ಸಹೋದರ ಸಾವು ನನಗೆ ಆಘಾತವನ್ನುಂಟು ಮಾಡಿದೆ. ದೇವರು ಅನ್ಯಾಯವನ್ನು ಮಾಡಿದ್ದಾನೆ. ಅವರು ಅನಾಥಾಶ್ರಮ, ಶಾಲೆ ನಿರ್ಮಾಣ ಮಾಡಿ ಸಾಮಾಜಿ ಕಾರ್ಯವನ್ನು ಬದುಕಿದ್ದಾಗ ಮಾಡಿದ್ದಾರೆ. ಅವರ ನಿಧನದ ನಂತ್ರ ಅವರು ಕಣ್ಣನ್ನು ಧಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ ಎಂದು ಹೇಳುತ್ತಾ ಪುನೀತ್ ಜೊತೆಗಿನ ಒಡನಾಟವನ್ನು ಸ್ಮರಿಸಿದ್ದಾರೆ.