– ಅಪ್ಪು ಇಂದಿಗೂ, ಎಂದಿಗೂ ನಮ್ಮ ಮನಸ್ಸಿನಲ್ಲಿದ್ದಾರೆ
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರ ಫೋಟೋ ಮುಂದೆ ‘ಏಕ್ ಲವ್ ಯಾ’ ಸಿನಿಮಾ ತಂಡ ಶಾಂಪೇನ್ ಚಿಮ್ಮಿಸಿ ಸಂಭ್ರಮಾಚರಣೆ ಮಾಡಿದೆ ಎನ್ನುವ ಕುರಿತಾಗಿ ನಿರ್ದೇಶಕ ಪ್ರೇಮ್ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದರು. ಈ ಬೆನ್ನಲ್ಲೇ ನಟಿ ರಕ್ಷಿತಾ ಕೂಡಾ ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ.
Advertisement
ನಟಿ ರಕ್ಷಿತಾ ಪ್ರೇಮ್ ಇನ್‍ಸ್ಟಾಗ್ರಾಮ್‍ನಲ್ಲಿ, ಅಪ್ಪು ಅಗಲಿಕೆಯ ನೋವಿನಿಂದ ನಾನಿನ್ನೂ ಹೊರಬರಲು ಸಾಧ್ಯವಾಗುತ್ತಿಲ್ಲ. ಹಲವಾರು ವಿಷಯಗಳು ನನ್ನನ್ನೂ ಇನ್ನೂ ಕಾಡುತ್ತಿವೆ. ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ, ಮಾಡುವುದೂ ಇಲ್ಲ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಶಾಂಪೇನ್ ಓಪನ್ ಮಾಡಿದ್ದು, ಅಪ್ಪು ಅಭಿಮಾನಿಗಳಲ್ಲಿ ಅಸಮಧಾನ ಉಂಟಾಗಿದ್ದರೆ ನನ್ನ ಮತ್ತು ನನ್ನ ತಂಡದ ಕಡೆಯಿಂದ ಕ್ಷಮೆಯಾಚಿಸುತ್ತೇನೆ. ಇದು ಯಾವುದು ಉದ್ದೇಶಪೂರ್ವಕವಲ್ಲ. ಅಪ್ಪು ಇಂದೀಗೂ ಎಂದಿಗೂ ನಮ್ಮ ಮನಸ್ಸಿನಲ್ಲಿದ್ದಾರೆ ಎಂದು ಬರೆದುಕೊಂಡು ಕ್ಷಮೆಯಾಚಿಸಿದ್ದಾರೆ. ರಕ್ಷತಾ ಈ ಪೋಸ್ಟ್ ಹಾಕುತ್ತಿದ್ದಂತೆ ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪುಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ: ಪ್ರೇಮ್ ಕ್ಷಮೆ
Advertisement
Advertisement
ನಿರ್ದೇಶಕ ಪ್ರೇಮ್ ಕೂಡಾ ಈ ವಿಚಾರವಾಗಿ ಕ್ಷಮೆ ಕೆಳಿದ್ದರು. ಅಪ್ಪು ಅವರು ಆಸ್ಪತ್ರೆಯಲ್ಲಿ ಮಲಗಿದ್ದರು. ಆಗ ನಾನು ಅವರ ಎರಡೂ ಕಾಲು ಹಿಡಿದುಕೊಂಡು ನನ್ನಿಂದ ಏನಾದರೂ ತಪ್ಪು ಆಗಿದ್ದರೆ ಕ್ಷಮಿಸಿ ಬಾಸ್ ಎಂದು ಕೇಳಿಕೊಂಡಿದ್ದೆ. ಅಪ್ಪು ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದಿದ್ದೇನೆ. ನನ್ನನ್ನು ಕ್ಷಮಿಸಿ. ನನಗೆ ಗೊತ್ತಾಗದೇ ಏನಾದ್ರೂ ಆಗಿದ್ದರೆ ಕ್ಷಮಿಸಿ. ನಿನ್ನೆ ನಮಗೆ ಗೊತ್ತಿಲ್ಲದೆ ತಪ್ಪು ಆಗಿದೆ. ಅಪ್ಪುಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ. ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಇದನ್ನೂ ಓದಿ: ಏಕ್ ಲವ್ ಯಾ ಸಿನಿಮಾ ತಂಡದಿಂದ ಅಪ್ಪುಗೆ ಅವಮಾನ- ಶಾಂಪೇನ್ ಚಿಮ್ಮಿಸಿ ಸಂಭ್ರಮ
Advertisement
ನಡೆದಿದ್ದೇನು?: ಏಕ್ ಲವ್ ಯಾ ಸಿನಿಮಾ ತಂಡ ಸಾಂಗ್ ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿತ್ತು, ಈ ವೇಳೆ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಲಾಯಿತ್ತು. ಆದರೆ ಶ್ರದ್ಧಾಂಜಲಿ ವೇಳೆ ಅಪ್ಪು ಫೋಟೋ ಮುಂದೆ ನಟಿ ರಕ್ಷಿತಾ ಪ್ರೇಮ್ ಶಾಂಪೇನ್ ಚಿಮ್ಮಿಸಿದ್ದರು. ಈ ವೇಳೆ ಅಪ್ಪು ಅವರ ಫೋಟೋ ಎಲ್‍ಇಡಿ ಮೇಲೆ ಬಂದಿದೆ. ಈ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರ ಆಗಿತ್ತು. ಇದನ್ನು ಗಮನಿಸಿದ ಸಾರಾ ಗೋವಿಂದ್ ಅವರು, ಅಪ್ಪು ಅಗಲಿಕೆ ನೋವಿನಿಂದ ಹೊರಬಂದಿಲ್ಲ. ಆದರೆ ಇಲ್ಲಿ ಅಪ್ಪು ಅವರಿಗೆ ಅವಮಾನ ಮಾಡಿದಂತಾಗಿದೆ. ಹೀಗಾಗಿ ಚಿತ್ರತಂಡ ಕೂಡಲೇ ಕ್ಷಮೆ ಕೇಳಬೇಕು ಎಂದು ಸೂಚನೆ ನೀಡಿದ್ದರು. ಅಂತೆಯೇ ಇದೀಗ ಪ್ರೇಮ್ ಹಾಗೂ ಅಕುಲ್ ಬಾಲಾಜಿ, ನಟಿ ರಕ್ಷಿತಾ ಪ್ರೇಮ್, ರಚಿತಾ ರಾಮ್ ಸೇರಿದಂತೆ ಇಡೀ ಚಿತ್ರತಂಡ ಕ್ಷಮೆ ಕೇಳಿದೆ. ಇದನ್ನೂ ಓದಿ: ಅಪ್ಪು ನೇತ್ರದಾನದಿಂದ ಇನ್ನೂ 10 ಮಂದಿಗೆ ದೃಷ್ಟಿ ನೀಡಲು ವೈದ್ಯರ ಪ್ರಯತ್ನ!