ಬೆಂಗಳೂರು: ನಟ ದಿ. ಪುನೀತ್ ರಾಜ್‍ಕುಮಾರ್ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಿಸಿದ್ದ ಡಾಕ್ಯುಮೆಂಟರಿಯ ಬಿಡುಗಡೆಗೆ ಎರಡೇ ದಿನ ಇರುವಾಗ ಅವರ ಅಗಲಿಕೆಯಿಂದ ಜನತೆಗೂ ಬರ ಸಿಡಿಲು ಬಡಿತಂದಾಗಿತ್ತು. ಇದೀಗ ಅವರ ಪತ್ನಿ ಡಾಕ್ಯುಮೆಂಟರಿ ರಿಲೀಸ್ ಮಾಡುತ್ತೇವೆ ಎನ್ನುವ ಭರವಸೆಯನ್ನು ಅಭಿಮಾನಿಗಳಿಗೆ ನೀಡಿದ್ದಾರೆ.
ಅಪ್ಪು ಅವರ ಕನಸೊಂದು 2021 ದಿಸೆಂಬರ್ 1ರಂದು ಬೆಳಕಿಗೆ ಬರಬೇಕಿತ್ತು. ಆದರೆ ಆ ಕನಸಿಗಿದು ಅಲ್ಪವಿರಾಮವಷ್ಟೇಯಾಗಿದೆ. ಅದನ್ನು ಅವರಿಷ್ಟದಂತೆಯೇ ನಿಮ್ಮೆದುರು ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯವರೆಗೆ ನೀವು ತೋರಿಸಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿಯಾಗಿದ್ದೇವೆ ಎಂದು ಬರೆದುಕೊಂಡು ಇನ್‍ಸ್ಟಾಗ್ರಾಮ್‍ನಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಪೋಸ್ಟ್ ಮಾಡಿದ್ದಾರೆ.
Advertisement
View this post on Instagram
Advertisement
ಪುನೀತ್‍ಗೆ ಉತ್ತರ ಕನ್ನಡವೆಂದರೆ ಬಹಳ ಪ್ರೀತಿ. ಇಲ್ಲಿನ ನಿಸರ್ಗ ಸೌಂದರ್ಯ, ಕಡಲತೀರ- ಜಲಪಾತಗಳ ಸೊಬಗನ್ನು ಪುನೀತ್ ನೆಚ್ಚಿಕೊಂಡಿದ್ದರು. ಈ ಬಗ್ಗೆ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಪುನೀತ್ ಹೇಳಿಕೊಂಡಿದ್ದರು. ಹೀಗಾಗಿ ಈ ವರ್ಷದ ಜನವರಿ- ಫೆಬ್ರುವರಿಯಲ್ಲಿ ಪುನೀತ್ ಹೆಚ್ಚಿನ ಸಮಯ ಉತ್ತರ ಕನ್ನಡದಲ್ಲೇ ಕಳೆದಿದ್ದರು. ಕುಮಟಾ, ಗೋಕರ್ಣ, ಮುರುಡೇಶ್ವರ, ಜೊಯಿಡಾ ತಾಲೂಕಿನಲ್ಲಿ ತಮ್ಮ ತಂಡದೊಂದಿಗೆ ತಿರುಗಾಡಿ ಡಾಕ್ಯುಮೆಂಟರಿಗಾಗಿ ಚಿತ್ರೀಕರಣ ನಡೆಸಿದ್ದರು. ಕಡಲತೀರಗಳಲ್ಲಿ ಓಡಾಡಿ, ಸ್ಟಂಟ್‍ಗಳನ್ನೂ ಮಾಡಿದ್ದರು. ಗೋಕರ್ಣಕ್ಕೆ ಡಾಕ್ಯುಮೆಂಟರಿ ಚಿತ್ರೀಕರಣಕ್ಕಾಗಿ ಭೇಟಿ ನೀಡಿದ್ದ ಪುನೀತ್ ಸಾಮಾನ್ಯರಂತೆ ಕಡಲತೀರದಲ್ಲಿ ಅಡ್ಡಾಡಿದ್ದರು . ಇದನ್ನೂ ಓದಿ: ತಾಯಿಯಾಗ್ತಿದ್ದಾರಾ ಪ್ರಿಯಾಂಕಾ ಚೋಪ್ರಾ?
Advertisement
ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು.
ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು.
ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು.
ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು.
ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ. @amoghavarsha @AJANEESHB @PRK_Productions @PRKAudio #mudskipper pic.twitter.com/ncE6CxOQrg
— Puneeth Rajkumar (@PuneethRajkumar) October 27, 2021
Advertisement
ಡಾಕ್ಯುಮೆಂಟರಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಬಿಡುಗಡೆಯಾಗಬೇಕಿತ್ತು. ಈ ಬಗ್ಗೆ ಪುನೀತ್, ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದಷ್ಟೇ ನೇತ್ರಾಣಿಯಲ್ಲಿ ಮಾಡಿದ ಸ್ಕೂಬಾ ಡೈವಿಂಗ್‍ನ ಫೋಟೊವೊಂದರ ಜೊತೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಡಾಕ್ಯಮೆಂಟರಿ ಬಿಡುಗಡೆಯ ಸುಳಿವು ನೀಡಿದ್ದರು. ಇದನ್ನೂ ಓದಿ: ಪತಿಯಿಂದ ವಿಚ್ಛೇದನ ಪಡೆಯುತ್ತಾರಾ ಪ್ರಿಯಾಂಕಾ ಚೋಪ್ರಾ?
ಆದರೆ ಅಕ್ಟೊಬರ್ 29ರಂದು ಪುನೀತ್ ರಾಜ್‍ಕುಮಾರ್ ಅವರು ಹೃದಯಸ್ತಂಭನದಿಂದ ಮೃತಪಟ್ಟರು. ಕುಟುಂಬ, ಸ್ಯಾಂಡಲ್‍ವುಡ್, ಅಭಿಮಾನಿಗಳನ್ನು ಅಗಲಿದರು. ಅವರನ್ನು ಕಳೆದುಕೊಂಡಿರುವ ದುಃಖ ಇನ್ನು ಇದೆ. ಆದರೆ ಅವರು ಕನಸು ಕಂಡಿದ್ದ ಗಂಧದಗುಡಿ ಡಾಕ್ಯುಮೆಂಟರಿ ಏನಾಯ್ತು ಎನ್ನುವ ಕೂತುಹಲ ಅಭಿಮಾನಿಗಳಿಗಿತ್ತು. ಇದೀಗ ಅದರ ಜವಾಬ್ದಾರಿಯನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಹೊತ್ತುಕೊಂಡಿದ್ದಾರೆ.