ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ಕಣ್ಣುಗಳನ್ನ ಇಬ್ಬರಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ.
ಪುನೀತ್ ಅವರು ದಾನ ಮಾಡಿದ್ದ ಕಣ್ಣುಗಳನ್ನು ನಿನ್ನೆ ಒಬ್ಬರಿಗೆ, ಇಂದು ಒಬ್ಬರಿಗೆ ನೀಡಲಾಗಿತ್ತು. ಚಿಕಿತ್ಸೆ ಯಶಸ್ವಿಯಾಗಿದೆ. ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್ ರಾಜ್‍ಕುಮಾರ್ ಅವರು ತಂದೆ ರಾಜ್‍ಕುಮಾರ್ ಹಾದಿಯಲ್ಲೇ ಸಾಗಿದ್ದಾರೆ. ವೈದ್ಯರು ಪುನೀತ್ ಕಣ್ಣುಗಳನ್ನ ಇಬ್ಬರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಿನ್ನೆ ಒಬ್ಬರಿಗೆ ಆಪರೇಷನ್ ಮಾಡಲಾಗಿದೆ ಮತ್ತು ಇಂದು ಮತ್ತೊಬ್ಬರಿಗೆ ಆಪರೇಷನ್ ಮಾಡಲಾಗಿದೆ. ಈ ಮೂಲಕ ಪುನೀತ್ ಅವರ ಎರಡೂ ಕಣ್ಣುಗಳ ಅಳವಡಿಕೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಸಾವಿನ ಬಳಿಕವೂ ಇಬ್ಬರ ಬಾಳಿನಲ್ಲಿ ಅಪ್ಪು ಬೆಳಕಾಗಿದ್ದಾರೆ. ನಾರಾಯಣ ನೇತ್ರಾಲಯ ವೈದ್ಯರು ಮಂಗಳವಾರ ಶಸ್ತ್ರಚಿಕಿತ್ಸೆ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ
ಪುನೀತ್ ರಾಜ್‍ಕುಮಾರ್ ಅವರು ನಿಧನರಾದ ಬಳಿಕ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ನೀಡಲಾಗಿತ್ತು. ಇದೀಗ ಅವರ ಕಣ್ಣುಗಳಿಂದ ಇಬ್ಬರ ಬಾಳಲ್ಲಿ ಬೆಳಕು ಮೂಡಿದೆ. ಇಂದು ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆಯನ್ನು ಈಡಿಗ ಸಂಪ್ರದಾಯದ ಮೂಲಕವಾಗಿ ನೆರವೇರಿಸಲಾಗಿದೆ. ಪುನೀತ್ ಅವರನ್ನು ಕಳೆದುಕೊಂಡ, ಅಭಿಮಾನಿಗಳು, ಕುಟುಂಬಸ್ಥರು, ಕಲಾವಿದರು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ಪುನೀತ್ ಸಾವು ದೊಡ್ಡ ಅನ್ಯಾಯ: ಸೃಜನ್ ಲೋಕೇಶ್