ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ. ಪುನೀತ್ ರಾಜ್‍ಕುಮಾರ್ ಅವರ ಕನಸು ಇಂದು ನನಸಾಗಿದೆ. ಕನ್ನಡ ನಾಡಿನ ಅರಣ್ಯಸಂಪತ್ತು, ವನ್ಯಜೀವಿ ಸಂಪತ್ತಿನ ಬಗ್ಗೆ ಚಿತ್ರಿಸಿರೋ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಬಿಡುಗಡೆ ಆಗಿದೆ.
Advertisement
ಪಾರ್ವತಮ್ಮ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಪಿಆರ್‌ಕೆ ಆಡಿಯೋ ಯೂಟ್ಯೂಬ್ ಚಾನೆಲ್‍ನಲ್ಲಿ ಇಂದು ಬೆಳಗ್ಗೆ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಟೀಸರ್ ನಲ್ಲಿ ದಟ್ಟಕಾಡಿನ ನಡುವೆ ಪುನೀತ್ ರಾಜ್‍ಕುಮಾರ್ ಪ್ರಯಾಣಿಸುವುದನ್ನು ಕಾಣಬಹುದಾಗಿದೆ. ಆನೆ, ಹುಲಿ, ಹಾವು ಸೇರಿದಂತೆ ಸುಂದರವಾದ ಪ್ರಕೃತಿ ಸೌಂದರ್ಯದ ದೃಶ್ಯಗಳು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ವಿಶೇಷವೆಂದರೆ ಕೊನೆಯಲ್ಲಿ ಡಾ. ರಾಜ್‍ಕುಮಾರ್ ಧ್ವನಿಯಲ್ಲಿರುವ ಅರಣ್ಯವನ್ನು ಉಳಿಸು, ಪ್ರಾಣಿಗಳನ್ನು ಉಳಿಸು ಎಂಬ ಸಂದೇಶ ಸಾರಲಾಗಿದೆ.
Advertisement
Advertisement
ಟೀಸರ್ ಜೊತೆಗೆ ಅಪ್ಪು ಅವರ ಕನಸಿದು, ಅದ್ಭುತ ಪಯಣ, ನಮ್ಮ ನೆಲದ ಘನತೆಯನ್ನು ಮೆರೆಸುವ ಕಥನ, ಮರುಕಳಿಸಿದ ಚರಿತ್ರೆಯಿದು ‘ಗಂಧದ ಗುಡಿ’ ಎಂದು ಕ್ಯಾಪ್ಷನ್‍ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬರೆದುಕೊಂಡಿದ್ದಾರೆ. ಮತ್ತೊಂದೆಡೆ ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಅವರು ಸಹ ಟೀಸರ್ ಅನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Advertisement
View this post on Instagram
ಅಮೋಘವರ್ಷ ನಿರ್ದೇಶನದ ಈ ಡಾಕ್ಯುಮೆಂಟರಿ ಸಿನಿಮಾ ಮುಂದಿನ ವರ್ಷ 2022ರಲ್ಲಿ ತೆರೆಕಾಣಲಿದೆ. ನಿನ್ನೆಯಷ್ಟೇ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು `ಹಿಂದೆಂದೂ ಕಾಣದ ಸಿನಿಮಾ ಅನುಭವ. ನಿಮ್ಮ ಮುಂದೆ’ ಅಂತ ಟ್ವೀಟ್ ಮಾಡಿದ್ದರು. ಈ ಮೂಲಕ ಟೀಸರ್ ಬಿಡುಗಡೆ ಬಗ್ಗೆ ಮಾಹಿತಿ ನಿಡಿದ್ದರು.
ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಅಪ್ಪು ಈ ಟೀಸರ್ ಬಿಡುಗಡೆಗೆ ಸಿದ್ಧತೆ ನಡೆಸಿದ್ದರು. ಈ ಬಗ್ಗೆ ಪುನೀತ್, ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದಷ್ಟೇ ನೇತ್ರಾಣಿಯಲ್ಲಿ ಮಾಡಿದ ಸ್ಕೂಬಾ ಡೈವಿಂಗ್‍ನ ಫೋಟೊವೊಂದರ ಜೊತೆ ಅಶ್ವಿನಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಡಾಕ್ಯುಮೆಂಟರಿ ಬಿಡುಗಡೆಯ ಸುಳಿವು ನೀಡಿದ್ದರು.