– ಮಠಕ್ಕೆ ಬಂದು ಪೂಜೆ ಮಾಡುವಂತೆ ಹೇಳಿದ ಶ್ರೀಗಳು
– ಶ್ರೀಗಳಿಗೆ ಸುಧಾಕರ್ ಸಾಥ್
ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್ ಕುಮಾರ್ ಅವರ ಕುಟುಂಬವನ್ನು ಭೇಟಿಯಾಗಿ ಆದಿಚುಂಚನಗಿರಿ ಶ್ರೀಗಳು ಸಾಂತ್ವನ ಹೇಳಿದ್ದಾರೆ.
ಇಂದು ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಆಗಮಿಸಿದ ಆದಿಚುಂಚನಗಿರಿ ಶ್ರೀಗಳು ಅಪ್ಪು ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ಕನ್ನಡ ಕಲಾ ಕ್ಷೇತ್ರಕ್ಕೆ ಪುನೀತ್ ರಾಜ್‍ಕುಮಾರ್ ಅವರು ನೀಡಿದ ಕೊಡುಗೆ ಅಪಾರ. ಮೊದೊಲಿನಿಂದಲೂ ರಾಜ್‍ಕುಮಾರ್ ಕುಟುಂಬಕ್ಕೆ ಮತ್ತು ಮಠಕ್ಕೆ ಅವಿನಾಭಾವ ಸಂಬಂಧ ಇದೆ ಎಂದರು.
Advertisement
Advertisement
ರಾಜ್‍ಕುಮಾರ್ ಕುಟುಂಬದ ಕುಡಿ ಪುನೀತ್ ಅವರು ಚಿಕ್ಕ ವಯಸ್ಸಿನಿಂದ ಕಲೆಗೆ ಜೀವನ ಮುಡುಪಾಗಿಟ್ಟಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಕುಟುಂಬ ಕಂಗೆಟ್ಟಿದೆ. ಅವರ ಅಗಲಿಕೆಯ ನೋವು ಭರಿಸಲು ಕಷ್ಟ. ಆದರೂ ಪ್ರತಿ ಕಷ್ಟದಲ್ಲೂ ಅಪ್ಪು ಕುಟುಂಬದ ಜೊತೆ ಮಠ ಇರುತ್ತದೆ ಎಂದು ತಿಳಿಸಿದರು.
Advertisement
ಅಪ್ಪು ಕುಟುಂಬಕ್ಕೆ ಮತ್ತು ಕನ್ನಡ ನಾಡಿಗೆ ಅಪ್ಪು ಅಗಲಿಕೆ ಭರಿಸುವ ಶಕ್ತಿ ದೇವರು ನೀಡಲಿ ಅಂತ ಕೇಳಿಕೊಳ್ತೀವಿ ಎಂದು ಹೇಳಿದ ಅವರು ಕುಟುಂಬಕ್ಕೆ ಆಶೀರ್ವಾದ ನೀಡಿದರು. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ಚಿರಂಜೀವಿ, ರಾಮ್‍ಚರಣ್
Advertisement
ಶ್ರೀಗಳಿಗೆ ಆರೋಗ್ಯ ಸಚಿವ ಸುಧಾಕರ್ ಸಾಥ್ ನೀಡಿದ್ದರು. ಈ ವೇಳೆ ಮಾತನಾಡಿದ ಸಚಿವ ಸುಧಾಕರ್ ಶ್ರೀಗಳು, ಇಂದು ಪುನೀತ್ ನಿವಾಸಕ್ಕೆ ಭೇಟಿ ಆಗಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಪುನೀತ್ ನಿಧನರಾಗಿ ಒಂದು ತಿಂಗಳು ಕಳೆದಿದೆ. ನೈತಿಕ ಸ್ಫೂರ್ತಿ ಮತ್ತು ವಿಶೇಷ ಆಶೀರ್ವಾದ ನೀಡಲು ಇಂದು ಶ್ರೀಗಳು ಬಂದಿದ್ದಾರೆ ಎಂದು ಹೇಳಿದರು.
ಅಶ್ವಿನಿ ಅವರಿಗೆ ವಿಶೇಷ ಆಶೀರ್ವಾದ ನೀಡಿದ್ದಾರೆ. ಶೀಘ್ರದಲ್ಲಿ ದೇವಸ್ಥಾನಕ್ಕೆ ಬಂದು ಪೂಜೆ ಮಾಡಿಸಿ ಅಂತ ಶ್ರೀಗಳು ಅವರ ಕುಟುಂಬಕ್ಕೆ ತಿಳಿಸಿದ್ದಾರೆ. ಶ್ರೀಗಳು ಬಂದಿರೋದು ಅವರ ಕುಟುಂಬಕ್ಕೆ ಸಮಾಧಾನ ತಂದಿದೆ. ಪುನೀತ್ ಕುಟುಂಬದ ಜೊತೆ ಮಠ, ಸ್ವಾಮೀಜಿಗಳು, ಲಕ್ಷಾಂತರ ಭಕ್ತರು ಸದಾ ಇರುತ್ತಾರೆ ಎಂದರು.
ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್‍ಕುಮಾರ್ ಹಾಜರಿದ್ದರು. ಇದನ್ನೂ ಓದಿ:ಹಿರಿಯ ನಟ ಶಿವರಾಮ್ ಆರೋಗ್ಯ ಗಂಭೀರ