Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ಕೊನೆಯದಾಗಿ ವಿಶೇಷ ಪೋಸ್ಟ್ ಮಾಡಿದ್ದ ಅಪ್ಪು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ಕೊನೆಯದಾಗಿ ವಿಶೇಷ ಪೋಸ್ಟ್ ಮಾಡಿದ್ದ ಅಪ್ಪು

Cinema

ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ಕೊನೆಯದಾಗಿ ವಿಶೇಷ ಪೋಸ್ಟ್ ಮಾಡಿದ್ದ ಅಪ್ಪು

Public TV
Last updated: October 29, 2021 9:01 pm
Public TV
Share
2 Min Read
puneeth rajkumar 1 1
SHARE
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ಪುನೀತ್ ರಾಜ್‍ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಕೊನೆಯದಾಗಿ ಪೋಸ್ಟ್ ಮಾಡಿದ್ದರು.
ಉತ್ತರ ಕನ್ನಡ ಜಿಲ್ಲೆಗೂ ನಟ ಪುನೀತ್ ರಾಜ್‍ಕುಮಾರ್ ಅವರಿಗೂ ಅವಿನಾಭಾವ ಸಂಬಂಧವಿದ್ದು, ಫೆಬ್ರವರಿ ತಿಂಗಳಲ್ಲಿ ಜಿಲ್ಲೆಯಲ್ಲಿ ಡಾಕ್ಯುಮೆಂಟರಿ ಚಿತ್ರೀಕರಣಕ್ಕೆ ಈ ಭಾಗಕ್ಕೆ ಬಂದು ಇಲ್ಲಿನ ಸೌಂದರ್ಯದ ಬಗ್ಗೆ ಮೂಕ ವಿಸ್ಮಿತರಾಗಿದ್ದರು.
ಬುಧವಾರ ಮುರುಡೇಶ್ವರದಲ್ಲಿ ತಾವು ಸ್ಕೂಬಾ ಡೈ ಮಾಡಿದ ಹಾಗೂ ಡಾಕ್ಯುಮೆಂಟರಿ ಚಿತ್ರೀಕರಣದ ಜಿಲ್ಲೆಯ ಪೋಸ್ಟ್‌  ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಿಸಿದ್ದ ಡಾಕ್ಯುಮೆಂಟರಿಯ ಬಿಡುಗಡೆಗೆ ಎರಡೇ ದಿನ ಇರುವಾಗ ಅವರ ಅಗಲಿಕೆ ದೊಡ್ಡ ನೋವು ತಂದಿದೆ.

ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು.
ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು.
ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು.
ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು.
ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ. @amoghavarsha @AJANEESHB @PRK_Productions @PRKAudio #mudskipper pic.twitter.com/ncE6CxOQrg

— Puneeth Rajkumar (@PuneethRajkumar) October 27, 2021

ಹಸಿರಿನ ನೆಲದಲ್ಲಿ ಪುನೀತ್ ಸಂಬಂಧ 
ಪುನೀತ್ ರಾಜ್‍ಕುಮಾರ್‌ಗೆ ಉತ್ತರ ಕನ್ನಡವೆಂದರೆ ಬಹಳ ಪ್ರೀತಿ. ಇಲ್ಲಿನ ನಿಸರ್ಗ ಸೌಂದರ್ಯ, ಕಡಲತೀರ, ಜಲಪಾತಗಳ ಸೊಬಗನ್ನು ಇಷ್ಟಪಡುತಿದ್ದ ಅವರು ಕುಟುಂಬ ಸಮೇತರಾಗಿ ಆಗಮಿಸಿ ಇಲ್ಲಿ ಸಮಯ ಕಳೆದಿದ್ದರು. ಹೀಗಾಗಿ ಈ ವರ್ಷದ ಜನವರಿ, ಫೆಬ್ರವರಿಯಲ್ಲಿ ಪುನೀತ್ ಹೆಚ್ಚಿನ ಸಮಯ ಉತ್ತರ ಕನ್ನಡದಲ್ಲೇ ಕಳೆದಿದ್ದರು.
ಜಿಲ್ಲೆಗೆ ಭೇಟಿ ನೀಡಿದ್ದ ಅವರು ಕುಮಟಾ, ಗೋಕರ್ಣ, ಮುರುಡೇಶ್ವರ, ಜೊಯಿಡಾ ತಾಲೂಕಿನಲ್ಲಿ ತಮ್ಮ ತಂಡದೊಂದಿಗೆ ತಿರುಗಾಡಿ ಡಾಕ್ಯುಮೆಂಟರಿಗಾಗಿ ಚಿತ್ರೀಕರಣ ನಡೆಸಿದ್ದರು. ಕಡಲತೀರಗಳಲ್ಲಿ ಓಡಾಡಿ, ಸ್ಟಂಟ್‍ಗಳನ್ನೂ ಮಾಡಿದ್ದರು. ಗೋಕರ್ಣಕ್ಕೆ ಡಾಕ್ಯುಮೆಂಟರಿ ಚಿತ್ರೀಕರಣಕ್ಕಾಗಿ ಭೇಟಿ ನೀಡಿದ್ದ ಪುನೀತ್ ಸಾಮಾನ್ಯರಂತೆ ಕಡಲತೀರದಲ್ಲಿ ಅಡ್ಡಾಡಿದ್ದರು. ತೀರದ ಹೋಟೆಲ್‍ಗಳಲ್ಲಿ ಖಾದ್ಯಗಳನ್ನು ಸವಿಯುತ್ತಾ ಕಾಲ ಕಳೆದಿದ್ದರು. ಗೋಕರ್ಣದ ಪುರಾಣ ಪ್ರಸಿದ್ಧ ಶ್ರೀಮಹಾಬಲೇಶ್ವರ ದೇವಾಲಯಕ್ಕೂ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ್ದರು.

ಮುರುಡೇಶ್ವರಕ್ಕೆ ಭೇಟಿ ನೀಡಿದ್ದ ಅವರು ನೇತ್ರಾಣಿ ದ್ವೀಪ ಪ್ರದೇಶದಲ್ಲಿ ಡಾಕ್ಯುಮೆಂಟರಿಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ನಡೆಸಿ, ಮುರುಡೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ತೆರಳಿದ್ದರು. ನೇತ್ರಾಣಿಯಲ್ಲಿ ನಡೆದ ಚಿತ್ರೀಕರಣದ ಒಂದು ತುಣುಕನ್ನು ಪುನೀತ್ ಹತ್ತು ದಿನಗಳ ಬಳಿಕ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಗೋಕರ್ಣ ಕಡಲತೀರದಲ್ಲಿ ಮಾಡಿದ್ದ ಬ್ಯಾಕ್ ಫ್ಲಿಪ್ ಸ್ಟಂಟ್‍ಗಳನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಅಭಿಮಾನಿಗಳನ್ನು ರಂಜಿಸಿದ್ದರು.
ನ.1ಕ್ಕೆ ಬಿಡುಗಡೆಯಾಗಬೇಕಿದ್ದ ಡಾಕ್ಯುಮೆಂಟರಿ
ಫೆಬ್ರವರಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಣ ಮಾಡಿದ್ದ ಡಾಕ್ಯುಮೆಂಟರಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಬಿಡುಗಡೆಯಾಗಬೇಕಿತ್ತು. ಈ ಬಗ್ಗೆ ಪುನೀತ್, ‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂಬ ಸಾಲುಗಳನ್ನು ನೇತ್ರಾಣಿಯಲ್ಲಿ ಮಾಡಿದ ಸ್ಕೂಬಾ ಡೈವಿಂಗ್‍ನ ಫೋಟೋವೊಂದನ್ನು ಹಂಚಿ ಡಾಕ್ಯುಮೆಂಟರಿ ಬಿಡುಗಡೆಯ ಸಮಯ ತಿಳಿಸಿದ್ದರು.

ಈ ಡಾಕ್ಯುಮೆಂಟರಿ ಪಿಆರ್‌ಕೆ ಪ್ರೊಡಕ್ಷನ್‌ ಹಾಗೂ ಮಡ್ ಸ್ಕಿಪ್ಪರ್ಸ್ ಮೀಡಿಯಾ ಹೌಸ್‍ನಿಂದ ತಯಾರಾಗಿತ್ತು. ಆದರೆ ಡಾಕ್ಯುಮೆಂಟರಿಯಲ್ಲಿ ಏನಿತ್ತು? ಯಾಕಾಗಿ ಮಾಡಲಾಗಿತ್ತು ಎಂಬ ಬಗ್ಗೆ ಪುನೀತ್ ಆಗಲಿ, ಅವರ ತಂಡವಾಗಲಿ ಎಲ್ಲಿಯೂ ಮಾಹಿತಿ ಹಂಚಿಕೊಂಡಿರಲಿಲ್ಲ. ದುರಂತ ಎನ್ನುವಂತೆ ಡಾಕ್ಯುಮೆಂಟರಿ ಬಿಡುಗಡೆಗೂ ಮುನ್ನ ಪುನೀತ್ ಅಗಲಿದ್ದಾರೆ. ಅವರು ಇಷ್ಟಪಡುವ ಉತ್ತರ ಕನ್ನಡ ಜಿಲ್ಲೆಯ ಸೊಬಗು ಅವರ ಜೀವನದ ಕೊನೆಯ ಕ್ಷಣದ ಪೋಸ್ಟ್‌ ಆಗಿದ್ದು, ಅಭಿಮಾನಿಗಳಿಗೆ ನೋವು ತಂದಿದೆ.

TAGGED:documentarykannada newsPuneeth Rajkumarsocial mediaUttara Kannadaಉತ್ತರ ಕನ್ನಡ ಜಿಲ್ಲೆನೇತ್ರಾಣಿಪಬ್ಲಿಕ್ ಟಿವಿಪುನೀತ್ ರಾಜ್‍ಕುಮಾರ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
13 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
25 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
1 hour ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?